

ಹೈದರಾಬಾದ್: ಜನನಿಬಿಡ ರಸ್ತೆಯಲ್ಲಿ ಚಾಲಕನೊಬ್ಬ ನಿರ್ಲಕ್ಷ್ಯದಿಂದ ಕಾರಿನ ಬಾಗಿಲು ತೆರೆದ ಪರಿಣಾಮ ಎರಡು ವರ್ಷದ ಹೆಣ್ಣು ಮಗು ಮೃತಪಟ್ಟಿರುವ ದಾರುಣ ಘಟನೆ ಇಲ್ಲಿನ ಎಲ್.ಬಿ.ನಗರದಲ್ಲಿ ನಡೆದಿದೆ.
ಮೃತ ಮಗುವನ್ನು ಧನಲಕ್ಷ್ಮಿ ಎಂದು ಗುರುತಿಸಲಾಗಿದ್ದು, ಈ ಘಟನೆ ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಚಾಲಕನೊಬ್ಬ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ರಸ್ತೆ ಮಧ್ಯದಲ್ಲಿ ಕಾರು ನಿಲ್ಲಿಸಿ, ಏಕಾಏಕಿ ಬಾಗಿಲನ್ನು ತೆರೆದಿದ್ದಾನೆ. ದುರಂತವೆಂದರೆ, ಸೈಯದ್ ಮತ್ತು ಶಶಿರೇಖಾ ಎಂಬ ದಂಪತಿ ತಮ್ಮ ಮಗಳು ಧನಲಕ್ಷ್ಮಿಯೊಂದಿಗೆ ಕಾರಿನ ಹಿಂದೆ ಬೈಕ್ನಲ್ಲಿ ಬರುತ್ತಿದ್ದರು.
ಕಾರಿನ ಬ ಬೈಕ್ ಕಾರಿನ ಬಾಗಿಲಿಗೆ ಡಿಕ್ಕಿ ಹೊಡೆದಿದ್ದು, ಮಗು ಮೃತಪಟ್ಟಿದೆ ಈ ಹೃದಯವಿದ್ರಾವಕ ಘಟನೆ ಸಮೀಪದಲ್ಲೇ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿರುವ ಪೋಲಿಸರು ಆರೋಪಿಗಾಗಿ ಹುಡುಕಾಡುತ್ತಿದ್ದಾರೆ.(ಏಜೆನ್ಸೀಸ್)