

ನವದೆಹಲಿ: ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದ ಆರೋಪ ಎದುರಿಸುತ್ತಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇಂದು ಸಂಜೆ ತಿಹಾರ್ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಪಕ್ಷದ ಕಾರ್ಯಕರ್ತರು ಹಾಗೂ ಎಲ್ಲಾ ಬೆಂಬಲಿಗರಿಗೆ ಧನ್ಯವಾದ ತಿಳಿಸಿದ ಕೇಜ್ರಿವಾಲ್, ಶೀಘ್ರದಲ್ಲೇ ಹಿಂತಿರುಗುತ್ತೇನೆ ಎಂದು ಹೇಳಿದ್ದೆ ಅದರಂತೆ ನಾನು ಹಿಂದಿರುಗಿದ್ದೇನೆ. ದೇವರ ಆಶೀರ್ವಾದ ನನ್ನ ಜೊತೆಗಿದೆ. ನಿರಂಕುಶ ಪ್ರಭುತ್ವದ ವಿರುದ್ಧ ನಾವು ಹೋರಾಡಬೇಕು ಎಂದರು.
ಈ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೂ ಧನ್ಯವಾದ ಅರ್ಪಿಸಿದರು. “ನಾಳೆ ಬೆಳಗ್ಗೆ ಬೆಳಗ್ಗೆ 11 ಗಂಟೆಗೆ ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಕೇಜ್ರಿವಾಲ್, ಮಧ್ಯಾಹ್ನ ಒಂದು ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ತಿಹಾರ್ ಜೈಲಿನಿಂದ ಹೊರ ಬಂದ ಕೇಜ್ರಿವಾಲ್ ಅವರನ್ನು ಪಂಜಾಬ್ ಸಿಎಂ ಭಗವಂತ್ ಮಾನ್, ಕೇಜ್ರಿವಾಲ್ ಪತ್ನಿ ಸುನೀತಾ ಸೇರಿದಂತೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಅದ್ಧೂರಿಯಾಗಿ ಸ್ವಾಗತಿಸಿದರು.