

ನವದೆಹಲಿ: ಹಿರಿಯ ನಾಯಕ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಗಾಂಧಿ ಕುಟುಂಬ ಸಂತಾಪ ವ್ಯಕ್ತಪಡಿಸಿದೆ. ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರು ಟ್ವೀಟ್ ಮಾಡಿದ್ದಾರೆ.
ಪ್ರಣಬ್ ಮುಖರ್ಜಿ ಅವರ ನಿಧನದಿಂದ ತುಂಬ ನೋವಾಗಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿದ್ದರು. ಅವರು ಸಹಾನುಭೂತಿ, ದೃಢತೆ, ಸಮಗ್ರತಾ ಭಾವವುಳ್ಳವರಾಗಿದ್ದರು. ಸದಾ ನೆನಪಲ್ಲಿ ಉಳಿಯುತ್ತಾರೆ ಎಂದು ಸೋನಿಯಾ ಗಾಂಧಿ ಟ್ವೀಟ್ ಮಾಡಿದ್ದಾರೆ.
ರಾಹುಲ್ ಗಾಂಧಿಯವರೂ ಕೂಡ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಪ್ರಣಬ್ ಮುಖರ್ಜಿಯವರ ಸಾವು ದುರದೃಷ್ಟಕರ. ಈ ಸುದ್ದಿಯಿಂದ ಇಡೀ ದೇಶ ದುಃಖದಲ್ಲಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ...ದೇಶದ ಜನತೆಯೊಂದಿಗೆ ಸೇರಿ ನಾನೂ ಪ್ರಣಬ್ ಮುಖರ್ಜಿಯವರಿಗೆ ಗೌರವ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ. (ಏಜೆನ್ಸೀಸ್)