'ಅಜಯ್‌ ರಾವ್‌' ಜೊತೆ ದಾಂಪತ್ಯ ಕಟ್ಟಿಕೊಳ್ಳೋ ಪ್ರಯತ್ನದಲ್ಲಿದ್ದೇನೆ; ನಿಮ್ಮ ಹಾರೈಕೆ ಇರಲಿ ಎಂದ ಪತ್ನಿ 'ಸ್ವಪ್ನಾ'| ajay rao

ajay rao
Published on

ಬೆಂಗಳೂರು : ಸ್ಯಾಂಡಲ್​ವುಡ್​ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿ, ದಂಪತಿ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಅಜಯ್‌ ರಾವ್‌ ಹಾಗೂ ಸಪ್ನಾ ದಂಪತಿ ಮಧ್ಯೆ ಮನಸ್ತಾಪ ಬಂದ ಕಾರಣ, ಇಬ್ಬರೂ ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡಿದ್ದರು. ಜೊತೆಗೆ ಪತ್ನಿ ಸಪ್ನಾ ಅವರು ಡಿವೋರ್ಸ್‌ ಬೇಕು ಎಂದು ಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ ಇದೀಗ ಸಪ್ನಾ ಅವರು ಸೋಶಿಯಲ್‌ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದು, ಅಜಯ್‌ ರಾವ್‌ ಜೊತೆ ದಾಂಪತ್ಯ ಕಟ್ಟಿಕೊಳ್ಳೋ ಪ್ರಯತ್ನದಲ್ಲಿದ್ದೇನೆ ಎಂದು ಬರೆದಿದ್ದಾರೆ.

ಪತ್ನಿ ಸಪ್ನಾ ಹೇಳಿದ್ದೇನು.?

ನಮಸ್ಕಾರ ತಾಯಿಯಾಗಿ ನನ್ನ ಮೊದಲ ಜವಾಬ್ದಾರಿ ನನ್ನ ಮಗಳ ಸುರಕ್ಷತೆ, ಗೌರವ ಮತ್ತು ಅವಳ ಭವಿಷ್ಯಕ್ಕಾಗಿ ನಾನು ಪ್ರತಿದಿನ ಧೈರ್ಯವನ್ನು ಕೂಡಿಸಿ, ನನಗೆ ತೀವ್ರವಾಗಿ ಪರೀಕ್ಷಿಸುವ ಸವಾಲುಗಳನ್ನು ಎದುರಿಸುತ್ತಿದ್ದೇನೆ. ಪ್ರಿಯ ಸ್ನೇಹಿತರೆ ಮತ್ತು ಸಹೋದರರೆ, ಈ ಹಂತದಲ್ಲಿ ನಾನು ಮತ್ತು ನನ್ನ ಮಗಳು ನಮ್ಮ ಬದುಕನ್ನು ಪುನರ್‌ ನಿರ್ಮಿಸಿಕೊಳ್ಳಲು ಮತ್ತು ನಮ್ಮ ದಾಂಪತ್ಯ ಜೀವನವನ್ನು ಪುನಃ ನಿರ್ಮಿಸಿಕೊಳ್ಳಲು ನಿಮ್ಮ ಹಾರೈಕೆಗಳು ಮತ್ತು ಪ್ರಾರ್ಥನೆಗಳನ್ನು ನಿಮ್ಮಲಿ ಕೇಳಿಕೊಳ್ಳುತ್ತಿದೇನೆ ಮತ್ತು ನಾನು ಅತ್ಯಂತ ಗೌರವದಿಂದ ತಿಳಿಸಲು ಬಯಸುವುದೇನೆಂದರೆ, ಈ ವಿಷಯವು ನಮ್ಮ ವೈಯಕ್ತಿಕ, ಆಳವಾದ ಭಾವನಾತ್ಮಕ ಮತ್ತು ದಾಂಪತ್ಯ ಜೀವನಕ್ಕೆ ಮಾತ್ರ ಸಂಬಂಧಿಸಿದ್ದು ಹೊರತು ಬೇರೆ ಯಾವುದೇ ರೀತಿಯಲ್ಲಿ ಸಂಬಂಧಿಸಿಲ್ಲ ಎಂದು ತಿಳಿಸಲು ಬಯಸುತೇನೆ ಎಂದು ಬರೆದಿದ್ದಾರೆ.

ಏನಿದು ಪ್ರಕರಣ.?

(ಏಜೆನ್ಸೀಸ್)

ಎಕ್ಸ್ ಕ್ಯೂಸ್ಮಿ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಹಿಟ್ ಪಡೆದಿದ್ದ ಅಜಯ್ ರಾವ್ 30ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ‘ತಾಜ್ ಮಹಲ್’, ‘ಪ್ರೇಮ್ ಕಹಾನಿ’, ‘ಕೃಷ್ಣನ್ ಲವ್ ಸ್ಟೋರಿ’, ‘ಕೃಷ್ಣನ್ ಮ್ಯಾರೇಜ್ ಸ್ಟೋರಿ’, ‘ಕೃಷ್ಣ-ಲೀಲಾ’ ಇನ್ನೂ ಹಲವು ಹಿಟ್ ಸಿನಿಮಾಗಳಲ್ಲಿ ಅಜಯ್ ನಟಿಸಿದ್ದಾರೆ. ಇತ್ತೀಚೆಗೆ ಅವರ ನಿರ್ಮಾಣದಲ್ಲಿಯೇ ಯುದ್ಧಕಾಂಡ ಚಿತ್ರ ರಿಲೀಸ್ ಆಗಿತ್ತು.

ಇಬ್ಬರ ನಡುವೆ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಡಿವೋರ್ಸ್​ಗೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಇತ್ತೀಚೆಗೆ ಈ ಜೋಡಿ ಹೊಸ ಮನೆ ಗೃಹ ಪ್ರವೇಶ ಮಾಡಿತ್ತು. ನಟ ಅಜಯ್ ರಾವ್ ವಿರುದ್ಧ ಅವರ ಪತ್ನಿ ಸಪ್ನಾ ಅವರು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ಸಹ ದಾಖಲಿಸಿದ್ದರು ಎನ್ನಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net