ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ

siddu
Published on

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಪ್ರಕರಣದಲ್ಲಿ ನಿವೇಶನಗಳನ್ನು ಸಿಎಂ ಹಿಂದಿರುಗಿಸಿ ತನಿಖೆಗೆ ಅವಕಾಶ ಕೊಡಬೇಕೆಂಬ ಬಿಜೆಪಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ತನಿಖಗೆ ನಡೆಸಲು ಜ್ಯುಡಿಷಿಯಲ್ ಕಮಿಷನ್ ರಚಿಸಲಾಗಿದೆ. ಬಿಜೆಪಿ ಯಾವುದಾದರೂ ತನಿಖೆಗೆ ನ್ಯಾಯಾಂಗ ಆಯೋಗ ರಚಿಸಿತ್ತೆ ಎಂದು ಪ್ರಶ್ನಿಸಿದರು.

ಕೋವಿಡ್ ಸಂದರ್ಭದಲ್ಲಿ 3 ರಿಂದ 4 ಸಾವಿರ ಕೋಟಿ ರೂಪಾಯಿ ನುಂಗಿ ಹಾಕಿದ್ದಾರೆ. ನ್ಯಾಯಾಂಗ ತನಿಖೆ ಅಥವಾ ಸಿಬಿಐಗೆ ವಹಿಸಿ ಎಂದು ಆಗ ನಾನು ಒತ್ತಾಯಿಸಿದ್ದೆ. ಆದರೆ ಅವರು ಕೊಡಲಿಲ್ಲ. ಯಾವುದೇ ತಪ್ಪಿಲ್ಲದಿದ್ದರೂ ಜನರ ಮನಸ್ಸಿನಲ್ಲಿ ಅನುಮಾನವಿರಬಾರದು ಎಂಬ ಕಾರಣಕ್ಕೆ ಮುಡಾ ತನಿಖೆಗೆ ನ್ಯಾಯಾಂಗ ಆಯೋಗ ರಚಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net