ನನಗೆ ಏನು ಬೇಕೋ ಅದನ್ನು ದೇವರ ಬಳಿ ಪ್ರಾರ್ಥನೆ ಮಾಡಿದ್ದೇನೆ : DK ಶಿವಕುಮಾರ್​

dk - 2025-07-04T180100.580
Published on

ಮೈಸೂರು: ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರು. ಅವರು ನಮಗೆ ಬುದ್ಧಿವಾದ ಹೇಳಿದ್ದಾರೆ, ಸಂದೇಶ ನೀಡಿದ್ದಾರೆ. ಅವರ ಮಾತಿಗೆ ನಾವೆಲ್ಲರೂ ಬದ್ಧರಾಗಿ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ” ಎಂದು ಡಿಸಿಎಂ DK ಶಿವಕುಮಾರ್ ತಿಳಿಸಿದರು.

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಶುಕ್ರವಾರ ದೇವಿಯ ದರ್ಶನ ಪಡೆದ ನಂತರ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಸಿಎಂ ರೇಸ್ ನಿಂದ ನೀವು ಹೊರಬಿದ್ದಿದ್ದೀರಾ ಎಂದು ಪ್ರಶ್ನಿಸಿದಾಗ, “ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ಬಂದಿದ್ದೇನೆ. ಇಲ್ಲಿ ರಾಜಕೀಯ ಮಾತನಾಡುವುದಕ್ಕೆ ಬಂದಿಲ್ಲ. ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಬಂದಿದ್ದೇನೆ” ಎಂದು ತಿಳಿಸಿದರು.

“ಯಾವುದೇ ಕೆಲಸ ಪ್ರಾರಂಭ ಮಾಡಬೇಕಾದರೂ ತಾಯಿಯ ಆಶೀರ್ವಾದ ಕೇಳುತ್ತೇನೆ. ಆದ ಕಾರಣ ಕುಟುಂಬ ಸಮೇತವಾಗಿ ಬಂದು ಈ ರಾಜ್ಯಕ್ಕೆ, ನಿಮಗೆ ಹಾಗೂ ನಮಗೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇನೆ” ಎಂದರು.

ನಿಮ್ಮ ಪ್ರಾರ್ಥನೆಗೆ ಭಗವಂತ ಫಲ ನೀಡುವ ದಿನಗಳು ಹತ್ತಿರ ಬಂದಿವೆಯೇ ಎಂದು ಕೇಳಿದಾಗ, “ನನಗೆ ಏನು ಬೇಕೋ ಅದನ್ನು ಪ್ರಾರ್ಥನೆ ಮಾಡಿದ್ದೇನೆ” ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net