ನಾನು ಕಾಂಗ್ರೆಸ್ ಸೇರುವ ತೀರ್ಮಾನವನ್ನು ಸ್ವಾಗತಿಸಿದ್ದೇ ಎಸ್​.ಎಂ. ಕೃಷ್ಣ; CM Siddaramaiah

cm siddaramaiah (14)
Published on

ಬೆಳಗಾವಿ: ಎಸ್.ಎಂ.ಕೃಷ್ಣ ರಾಜ್ಯಪಾಲರಾಗಿದ್ದಾಗಲೇ ನಾನು ಕಾಂಗ್ರೆಸ್ ಸೇರಿದ್ದು. ನಾನು ಭೇಟಿಯಾಗಿ, ಕಾಂಗ್ರೆಸ್ ಸೇರುವ ತೀರ್ಮಾನವನ್ನು ತಿಳಿಸಿದೆ. ಅವರು ನನ್ನ ತೀರ್ಮಾನವನ್ನು ಸ್ವಾಗತಿಸಿದ್ದರು ಎಂದು ಸಿಎಂ ಸಿದ್ದರಾಮಯ್ಯ(CM Siddaramaiah )ಹೇಳಿದರು.

ವಿಧಾನಸಭೆಯಲ್ಲಿ ಮಾಜಿ ಸಿಎಂ, ದಿವಂಗತ ಎಸ್​. ಎಂ.ಕೃಷ್ಣ ಅವರ ಜತೆಗಿನ ಸಂಬಂಧಗಳ(ಒಡನಾಟ) ಬಗ್ಗೆ ಮಾತನಾಡಿದರು.

ಎಸ್.ಎಂ.ಕೃಷ್ಣ ಅವರು, ಮುತ್ಸದ್ದಿ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘಕಾಲ ರಾಜಕಾರಣ ಮಾಡಿದ್ದರು.‌ ನಾನು ವಿದ್ಯಾರ್ಥಿ ಆಗಿದ್ದಾಗ ಅವರು ಕರೆದಿದ್ದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ಭಾಗವಹಿಸಿದ್ದೆ. ಬಳಿಕ ನಾನು ಲೋಹಿಯಾ ಅವರ ಸಮಾಜವಾದಿ ಪಕ್ಷ ಸೇರ್ಪಡೆಯಾದೆಮ ಎಂದರು.

ಎಸ್.ಎಂ.ಕೃಷ್ಣ 1962 ರಲ್ಲೇ ಸ್ವತಂತ್ರವಾಗಿ ವಿಧಾನಸಭೆಗೆ ಸ್ಪರ್ಧಿಸಿದ್ದರು. ವಿಧಾನಸಭೆ, ವಿಧಾನ‌ ಪರಿಷತ್, ರಾಜ್ಯಸಭೆ, ಲೋಕಸಭೆ ನಾಲ್ಕೂ ಸದನಗಳ ಸದಸ್ಯರೂ ಆಗಿದ್ದು, ರಾಜ್ಯದ ಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್, ಕೇಂದ್ರ ಸಚಿವ ಹಾಗೂ ರಾಜ್ಯಪಾಲರೂ ಆಗಿದ್ದ ಅಪರೂಪದ ರಾಜಕಾರಣಿ. ಒಳ್ಳೆ ಸಂಸದೀಯ ಪಟು, ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದರು‌. ಯಾವತ್ತೂ ದ್ವೇಷದ ರಾಜಕಾರಣ ಮಾಡಿದವರಲ್ಲ. ಅವರ ಕಾಲದಲ್ಲೇ ಡಾ.ರಾಜ್ ಕುಮಾರ್ ಅವರ ಅಪಹರಣ ಆಗಿ ಆ ಸಂದರ್ಭದ ದೊಡ್ಡ ಸವಾಲನ್ನು ಎದುರಿಸಿದ್ದರು. ಅದನ್ನು ಅವರು ನಿಭಾಯಿಸಿದ್ದರು ಎಂದು ಹೇಳಿದರು.

ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಿಂಗಾಪುರದಂತೆ ಮಾಡಬೇಕು ಎನ್ನುವ ಉದ್ದೇಶ ಹೊಂದಿದ್ದರು. ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎನ್ನುವ ಹೆಗ್ಗಳಿಕೆ ಬರಲು ಎಸ್.ಎಂ.ಕೃಷ್ಣ ಅವರ ಕೊಡುಗೆ ಅಪಾರ. ಕಾಂಗ್ರೆಸ್ ಮೂಲಕ ಸುದೀರ್ಘ ರಾಜಕಾರಣ ಮಾಡಿ ಬಿಜೆಪಿ ಸೇರಿ ಒಂದು ವರ್ಷಕ್ಕೆ ರಾಜಕೀಯ ನಿವೃತ್ತಿ ಘೋಷಿಸಿದ ದಕ್ಷ ಆಡಳಿತಗಾರ, ಸಜ್ಜನ-ಮುತ್ಸದ್ದಿ ರಾಜಕಾರಣಿ ಆಗಿದ್ದರು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net