"ಸಂಸತ್ತಿನಲ್ಲಿ ವಿದ್ಯಾರ್ಥಿಗಳ ಧ್ವನಿಯಾಗುತ್ತೇನೆ": ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಭರವಸೆ

Untitled-design-52-1
Published on

ನವದೆಹಲಿ: ನೀಟ್​-ಯುಜಿ ವೈದ್ಯಕೀಯ ಪ್ರವೇಶ ವಿವಾದದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಮೋದಿ ಅವರು ಹೊಸ ಅವಧಿಗೆ ಪ್ರಮಾಣವಚನ ಸ್ವೀಕರಿಸುವ ಮುನ್ನವೇ ಪರೀಕ್ಷೆಯಲ್ಲಿನ ಅಕ್ರಮಗಳು 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹಾಳುಮಾಡಿವೆ ಎಂದು ಆರೋಪಿಸಿದರು.

ಸಂಸತ್ತಿನಲ್ಲಿ ದೇಶದ ವಿದ್ಯಾರ್ಥಿಗಳ ಧ್ವನಿಯಾಗುತ್ತೇನೆ ಮತ್ತು ಅವರ ಭವಿಷ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಬಲವಾಗಿ ಪ್ರಸ್ತಾಪಿಸುತ್ತೇನೆ ಎಂದು ರಾಹುಲ್ ಗಾಂಧಿ ಭರವಸೆ ನೀಡಿದರು. ನರೇಂದ್ರ ಮೋದಿ ಇನ್ನೂ ಪ್ರಮಾಣವಚನ ಸ್ವೀಕರಿಸಿಲ್ಲ ಮತ್ತು ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳನ್ನು ಧ್ವಂಸಗೊಳಿಸಿವೆ ಎಂದು ತಮ್ಮ ಎಕ್ಸ್​​​ನಲ್ಲಿ ಹಂಚಿಕೊಂಡಿರುವ ಪೋಸ್ಟ್​​ನಲ್ಲಿ ತಿಳಿಸಿದ್ದಾರೆ.

ಒಂದೇ ಪರೀಕ್ಷಾ ಕೇಂದ್ರದ ಆರು ವಿದ್ಯಾರ್ಥಿಗಳು ಗರಿಷ್ಠ ಅಂಕಗಳೊಂದಿಗೆ ಪರೀಕ್ಷೆಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಎಂದು ಮಾಜಿ ಕಾಂಗ್ರೆಸ್ ಮುಖ್ಯಸ್ಥರು ಹೇಳಿದರು. ಆದರೆ ಅನೇಕರು ತಾಂತ್ರಿಕವಾಗಿ ಸಾಧ್ಯವಾಗದ ಅಂಕಗಳನ್ನು ಪಡೆದಿದ್ದಾರೆ, ಆದರೆ ಸರ್ಕಾರವು ಪತ್ರಿಕೆ ಸೋರಿಕೆಯ ಸಾಧ್ಯತೆಯನ್ನು ನಿರಂತರವಾಗಿ ನಿರಾಕರಿಸುತ್ತಿದೆ ಎಂದರು.

ನಮ್ಮ ಪ್ರಣಾಳಿಕೆಯಲ್ಲಿ ಕಾನೂನೊಂದನ್ನು ರೂಪಿಸುವ ಮೂಲಕ ವಿದ್ಯಾರ್ಥಿಗಳಿಗೆ ಪೇಪರ್ ಸೋರಿಕೆಯಿಂದ ಮುಕ್ತಿ ನೀಡುವುದಾಗಿ ಭರವಸೆ ನೀಡಿದ್ದೆವು, ಪ್ರಸ್ತುತ ನಾನು ಸಂಸತ್ತಿನಲ್ಲಿ ದೇಶದ ಎಲ್ಲಾ ವಿದ್ಯಾರ್ಥಿಗಳಿಗೆ ಧ್ವನಿಯಾಗುತ್ತೇನೆ ಎಂದು ಭರವಸೆ ನೀಡುತ್ತೇನೆ ಎಂದಿದ್ದಾರೆ.

NEET-UG ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಅಂಕಗಳನ್ನು ಹೆಚ್ಚಿಸಲಾಗಿದೆ ಎಂಬ ಆರೋಪಗಳ ನಡುವೆ, 1,500ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೀಡಿದ ಗ್ರೇಸ್ ಅಂಕಗಳನ್ನು ಪರಿಶೀಲಿಸಲು ಶಿಕ್ಷಣ ಸಚಿವಾಲಯವು ನಾಲ್ಕು ಸದಸ್ಯರ ಸಮಿತಿಯನ್ನು ರಚಿಸಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಶನಿವಾರ ಪ್ರಕಟಿಸಿದೆ. (ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net