ಇಬ್ರಾಹಿಂ ಜೆಡಿಎಸ್ ಚಿಹ್ನೆ ಬಳುಸುವಂತಿಲ್ಲ; ಕೋರ್ಟ್ ಆದೇಶ

JDS LOGO
Published on

ಬೆಂಗಳೂರು: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಚಿಹ್ನೆ, ಲೆಟರ್ ಹೆಡ್‌ಗಳನ್ನು ಜೆಡಿಎಸ್ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಬಳಕೆ ಮಾಡುವಂತಿಲ್ಲ.

ಹೌದು, ಈ ಕುರಿತು ಪ್ರಿನ್ಸಿಪಲ್ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್ ಆದೇಶ ನೀಡಿದೆ. ಅಷ್ಟೇ ಅಲ್ಲ, ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ, ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ನ್ಯಾಯಾಲಯವು ಆದೇಶ ನೀಡಿದೆ.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಛಾಟಿಸಿದ್ದರು. ಇದನ್ನು ಖಂಡಿಸಿ ಇಬ್ರಾಹಿಂ, ತಮ್ಮದೇ ನಿಜವಾದ ಪಕ್ಷ ಎಂದು ಕೋರ್ಟ್ ಮೆಟ್ಟಿಲೇರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net