

ನವದೆಹಲಿ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ಸಿಎ ನವೆಂಬರ್ ಪರೀಕ್ಷೆಯ ವೇಳಾಪಟ್ಟಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.
ಫೌಂಡೇಶನ್, ಇಂಟರ್ಮೀಡಿಯೆಟ್ ಮತ್ತು ಅಂತಿಮ ವರ್ಷದ ಕೋರ್ಸ್‌ಗಳ ಪರೀಕ್ಷೆಯ ವೇಳಾಪಟ್ಟಿಯನ್ನು ಅಧಿಕೃತ ವೆಬ್‌ಸೈಟ್‌ನಿಂದ icai.org ನಲ್ಲಿ ಡೌನ್‌ಲೋಡ್ ಮಾಡಬಹುದು.
ಐಸಿಎಐ ಸಿಎ ನವೆಂಬರ್ ಪರೀಕ್ಷೆಯು ನವೆಂಬರ್ 1 ರಿಂದ ಪ್ರಾರಂಭವಾಗಿ ನವೆಂಬರ್ 18 ರಂದು ಮುಕ್ತಾಯಗೊಳ್ಳಲಿದೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆ ಆಗಸ್ಟ್ 5 ರಿಂದ ಪ್ರಾರಂಭವಾಗಿ ಆಗಸ್ಟ್ 25 ರಂದು ಕೊನೆಗೊಳ್ಳಲಿದೆ.
ಕೊನೆಯ ದಿನಾಂಕದ ನಂತರ ಅರ್ಜಿ ಸಲ್ಲಿಸಲಿಚ್ಛಿಸುವ ಅಭ್ಯರ್ಥಿಗಳು ದಂಡ ಪಾವತಿಸಿ ಆಗಸ್ಟ್ 25 ರಿಂದ ಸೆಪ್ಟೆಂಬರ್ 4 ರವರೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ https://resource.cdn.icai.org/60304icai-exam-nov2020.pdf ಸಂಪರ್ಕಿಸಬಹುದು.