ವಿದ್ಯಾರ್ಥಿ ಸಾಧಕನಾದರೆ ಗುರುವಿಗೆ ಸಂತಸ

skp teacher
ಶಿಕಾರಿಪುರದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರನ್ನು ಶಾಸಕ ಬಿ.ವೈ.ವಿಜಯೇಂದ್ರ ಗೌರವಿಸಿದರು. ಲೋಕೇಶ್ವರಪ್ಪ, ಮಧುಕೇಶ್ವರ್, ಲೋಕೇಶ್ವರಪ್ಪ ಇತರರಿದ್ದರು.
Published on

ಶಿಕಾರಿಪುರ: ವಿದ್ಯಾದಾನ ಮಾಡುವಂತಹ ಮಹಾಸಂತರು ಶಿಕ್ಷಕರು. ದೇಶದ ಭವಿಷ್ಯವನ್ನು ರೂಪಿಸುವಂತಹ ಗುರುಪರಂಪರೆ ಯಾವತ್ತೂ ಪ್ರಾತಃಸ್ಮರಣೀಯ ಎಂದು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.

ಶಿಕ್ಷಣ ಇಲಾಖೆಯಿಂದ ಸಾಂಸ್ಕೃತಿಕ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾವೆಲ್ಲರೂ ಒಂದಿಲ್ಲೊಂದು ಸಂದರ್ಭದಲ್ಲಿ ಗುರುಹಿರಿಯರಿಂದ ಅಕ್ಷರ ಕಲಿತವರು. ವಿದ್ಯೆ ಕಲಿತು ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.

ವಿದ್ಯಾರ್ಥಿಗಳ ಎದೆಯಲ್ಲಿ ಅಕ್ಷರವನ್ನು ಕೆತ್ತಿ ಸಾಕ್ಷರರನ್ನಾಗಿ ಮಾಡುತ್ತಾರೆ. ಸಾಧಕನಾದರೆ ಅದನ್ನು ದೂರದಿಂದ ನೋಡಿ ಸಂಭ್ರಮಿಸುತ್ತಾರೆ. ನಮಗೆ ಇವತ್ತಿಗೂ ನೆನಪಿರುವುದು ಪ್ರಾಥಮಿಕ ಶಾಲೆಯ ಶಿಕ್ಷಕರು. ನಮ್ಮನ್ನು ತಿದ್ದಿ ತೀಡಿ ಬೆಳೆಸಿದ ಮಹಾತ್ಮರು. ಶಿಕ್ಷಕರು ಸಹ ಇಂದು ಅಧ್ಯಯನ ಮಾಡಬೇಕು. ಎಲ್ಲ ಕ್ಷೇತ್ರದಲ್ಲೂ ಒತ್ತಡ ಸಹಜ. ಜತೆಗೆ ಆರೋಗ್ಯದ ಕಡೆಗೂ ಗಮನಕೊಡಬೇಕು ಎಂದು ತಿಳಿಸಿದರು.

ಸಮಾಜದಲ್ಲಿ ಅತ್ಯಂತ ಶ್ರೇಷ್ಠ ಉದ್ಯೋಗಗಳಲ್ಲಿ ಶಿಕ್ಷಕ ವೃತ್ತಿಯೂ ಒಂದು. ಸರ್ಕಾರಿ ಶಾಲೆಗಳ ಮಕ್ಕಳು ಇಂದು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಿ ಪ್ರಕಾಶಿಸುತ್ತಿದ್ದಾರೆ. ಶಿಕ್ಷಕರು ರಾಷ್ಟ್ರೀಯ ಚಿಂತನೆಗಳನ್ನು ಮಕ್ಕಳಲ್ಲಿ ತುಂಬಬೇಕು. ಪ್ರಶಸ್ತಿ ವಿಜೇತ ಶಿಕ್ಷಕ ಶಿಕ್ಷಕಿಯರನ್ನು ಸನ್ಮಾನಿಸಲು ಸಂತಸವೆನಿಸುತ್ತಿದೆ ಎಂದರು.

ಪುರಸಭೆ ಅಧ್ಯಕ್ಷೆ ಸುನಂದಾ ಮಂಜುನಾಥ್, ಉಪಾಧ್ಯಕ್ಷೆ ರೂಪಾ ಮಂಜುನಾಥ್, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಎಸ್.ಪಿ.ನಾಗರಾಜ ಗೌಡ, ಬಿಇಒ ಲೋಕೇಶ್ವರಪ್ಪ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಧುಕೇಶ್ವರ್, ತಹಸೀಲ್ದಾರ್ ಮಂಜುಳಾ ಭಜಂತ್ರಿ, ಇಒ ನಾಗರಾಜ್, ಉಪನ್ಯಾಸಕ ಡಾ. ಮೋಹನ್ ಚಂದ್ರಗುತ್ತಿ, ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಎಂ.ಜಿ.ಪ್ರಕಾಶ್, ಜಿಲ್ಲಾ ಉಪಾಧ್ಯಕ್ಷ ಬಿ.ಆರ್.ಮಂಜಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net