ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಕಪಾಲಿ ಬೆಟ್ಟ ಯೇಸು ಬೆಟ್ಟವಾಗುವುದು ಖಚಿತ: ಪ್ರತಾಪ್ ಸಿಂಹ

prathap simha Bjp
Published on

ಮೈಸೂರು: ನಿನ್ನೆ ಮೈಸೂರಿನಲ್ಲಿ ನಡೆದ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ಕಾರ್ಯಕರ್ತರು ಮೈ ಮರೆತರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಕುರಿತಾಗಿ ಇಂದು ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್​​ನವರದ್ದು, ತಾಲಿಬಾನ್ ಸರ್ಕಾರ ಹೇಳಿಕೆ ವಿಚಾರ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೌದು, ನಾನು ಕಾಂಗ್ರೆಸ್ ಕುರಿತು ಈ ಹೇಳಿಕೆ ನೀಡಿದ್ದೇನೆ. ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದರೆ ತಾಲಿಬಾನ್ ಸರ್ಕಾರ ಬರುತ್ತದೆ. ಕಪಾಲಿ ಬೆಟ್ಟವನ್ನು ಯೇಸು ಬೆಟ್ಟ ಮಾಡುತ್ತಾರೆ. ಆ ನಿಟ್ಟಿನಲ್ಲಿ ಹೇಳಿಕೆ ನೀಡಿದ್ದೇನೆಂದು ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ ಅವರು ಕೆಎಫ್‌ಡಿ, ಪಿಎಫ್‌ಐ ಮೇಲಿನ ಕೇಸ್ ವಾಪಸ್ ತೆಗೆದುಕೊಂಡರು. ಅದರ ಪರಿಣಾಮವಾಗಿ 175 ಕೇಸ್‌ಗಳನ್ನು ವಾಪಸ್ ತೆಗೆದುಕೊಳ್ಳಬೇಕಾಯಿತ್ತು. ಹೀಗಾಗಿ ಹಿಂದುಪರ ಸಂಘಟನೆಗಳ ಕಾರ್ಯಕರ್ತರ ಕೊಲೆಯಾಯಿತು ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net