ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುವೆ

sgr bus
ಸಾಗರದಿಂದ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ನೂತನ ಕೆಎಸ್‌ಆರ್‌ಟಿಸಿ ಬಸ್ ಸೇವೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿದರು. ಸುರೇಶ್ ಬಾಬು, ಕಲಸೆ ಚಂದ್ರಪ್ಪ, ಗಣಪತಿ ಮಂಡಗಳಲೆ ಇತರರಿದ್ದರು.
Published on

ಸಾಗರ: ನಾನು ಮೂರು ಬಾರಿ ಶಾಸಕನಾಗಿದ್ದೇನೆ. ಆಡಳಿತದ ಎಲ್ಲ ವಿಧಾನಗಳು ನನಗೆ ಗೊತ್ತಿದೆ. ವರಿಷ್ಠರು ಅವಕಾಶ ಕೊಟ್ಟರೆ ಸಚಿವನಾಗಿ ಉತ್ತಮ ಕೆಲಸ ಮಾಡುತ್ತೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಸಾಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬುಧವಾರ ಸಾಗರದಿಂದ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ನೂತನ ಸರ್ಕಾರಿ ಬಸ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿ. ನಾನು ಸನ್ಯಾಸಿಯಲ್ಲ. ಸಚಿವ ಸ್ಥಾನ ಸಿಗಬಹುದು ಎನ್ನುವ ನಿರೀಕ್ಷೆ ಇದೆ ಎಂದರು.

ರಾಜ್ಯದಲ್ಲಿ ಸರ್ಕಾರಿ ಬಸ್ ಸೇವೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಶಕ್ತಿ ಯೋಜನೆ ಮೂಲಕ ಪ್ರತಿದಿನ ಹೆಚ್ಚಿನ ಪ್ರಯಾಣಿಕರು ಸಂಚರಿಸುತ್ತಿದ್ದಾರೆ. ರಾಜ್ಯದಲ್ಲಿ ಒಂದು ವರ್ಷಕ್ಕೆ 30 ಕೋಟಿ ರೂ. ಆದಾಯ ಬರುತ್ತಿದೆ. ಸಾಗರ ಘಟಕದಲ್ಲಿ ಪ್ರತಿದಿನ ಶಕ್ತಿ ಯೋಜನೆಯಡಿ 15 ಸಾವಿರ ಜನರು ಪ್ರಯಾಣ ಮಾಡುತ್ತಿದ್ದು, 7 ಲಕ್ಷ ರೂ. ಆದಾಯ ಬರುತ್ತಿದೆ. ಉಚಿತ ಬಸ್ ಬಿಟ್ಟಿದ್ದರೂ ನಿಗಮಕ್ಕೆ ಆದಾಯ ಬರುವುದು ಕಡಿಮೆಯಾಗಿಲ್ಲ ಎಂದರು.

ಅಡಕೆ ಹಾನಿಕಾರಕ ಎಂದು ಈ ಹಿಂದೆ ಕೇಂದ್ರ ಸರ್ಕಾರದಿಂದ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಲಾಗಿದೆ. ಅದನ್ನು ತೆಗೆಸುವ ಕೆಲಸ ಕೇಂದ್ರದಿಂದ ಆಗಬೇಕು. ಡಬ್ಲುೃಎಚ್‌ಒಗೂ ಇದನ್ನು ಕೇಂದ್ರ ಸರ್ಕಾರದ ಮೂಲಕವೇ ಮನವರಿಕೆ ಮಾಡಿಕೊಡಬೇಕು. ರಾಜ್ಯ ಸರ್ಕಾರ ತನ್ನ ಪ್ರಯತ್ನವನ್ನು ಮಾಡುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ಪ್ರಮುಖರಾದ ಸುರೇಶ್ ಬಾಬು, ಕಲಸೆ ಚಂದ್ರಪ್ಪ, ಗಣಪತಿ ಮಂಡಗಳಲೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net