ವಾಹನದ ನಂಬರ್ ಪ್ಲೇಟ್ ಮರೆಮಾಚಿದರೇ ಇದೇ ಗತಿ..! ಎಚ್ಚರ

bike
Published on

ಬೆಂಗಳೂರು: ದ್ವಿಚಕ್ರ ವಾಹನದ ನಂಬರ್ ಪ್ಲೇಟ್ ಮಾಸ್ಕ್‌ನಿಂದ ಮರೆಮಾಚಿಕೊಂಡು ಚಲಾಯಿಸುತ್ತಿದ್ದ ಸವಾರನ ವಿರುದ್ಧ ಮಹದೇವಪುರ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿ ವಾಹನ ಜಪ್ತಿ ಮಾಡಿದ್ದಾರೆ.

ಅ.11ರಂದು ದ್ವಿಚಕ್ರ ವಾಹನದ ನಂಬರ್ ಪ್ಲೇಟ್ ಮರೆಮಾಚಿಕೊಂಡು ಚಲಾಯಿಸುತ್ತಿದ್ದ ಪೋಟೋವನ್ನು ಸಾರ್ವಜನಿಕರು ತೆಗೆದು ಸಾಮಾಜಿಕ ಜಾಲತಾಣದಲ್ಲಿ ನಗರ ಸಂಚಾರ ವಿಭಾಗದ ಖಾತೆಗೆ ಟ್ಯಾಗ್ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಮಹದೇವಪುರ ಸಂಚಾರ ಪೊಲೀಸರು, ದ್ವಿಚಕ್ರ ವಾಹನ ಮತ್ತು ಸವಾರನನ್ನು ಪತ್ತೆ ಮಾಡಿದ್ದಾರೆ.

ಬಳಿಕ ಮಹದೇವಪುರ ಪೊಲೀಸ್ ಠಾಣೆಗೆ ದೂರು ಕೊಟ್ಟು ಎಫ್ಐಆರ್ ದಾಖಲಿಸಿದ್ದಾರೆ. ನಂಬರ್ ಪ್ಲೇಟ್ ಮರೆಮಾಚಿ ವಾಹನ ಚಲಾಯಿಸುವುದು ಅಪರಾಧವಾಗಿದ್ದು, ಅಂತವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಪೂರ್ವ ಸಂಚಾರ ವಿಭಾಗ ಡಿಸಿಪಿ ಕುಲದೀಪ್ ಕುಮಾರ್ ಜೈನ್ ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net