

ಅಜ್ಜಂಪುರ: ಶ್ರದ್ಧೆ ಮತ್ತು ನಿಷ್ಠೆಯಿಂದ ಕಾಯಕ ಮಾಡಿದಾಗ ಮಾತ್ರ ಜೀವನದಲ್ಲಿ ಪ್ರಗತಿ ಕಾಣಬಹುದು ಎಂದು ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ಚಂದ್ರಶೇಖರ್ ಗಡೀಹಳ್ಳಿ ಹೇಳಿದರು. ಪಟ್ಟಣದ ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ವಿಶ್ವಕರ್ಮ ದಿನಾಚರಣೆಯಲ್ಲಿ ಮಾತನಾಡಿದರು. ವಿಶ್ವಕರ್ಮ ವಡಾಳ್ ಮಠದ ಅಧ್ಯಕ್ಷ ಮಹೇಂದ್ರಚಾರ್ ವಿಶ್ವಕರ್ಮ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೆರವಣಿಗೆ ಚಾಲನೆ ನೀಡಿ ಮಾತನಾಡಿ, ಸಣ್ಣ ಸಮುದಾಯಗಳು ಸಂಘಟಿತರಾದಾಗ ಇಂತಹ ಕಾರ್ಯಕ್ರಮಕ್ಕೆ ನಿಜಾರ್ಥ ಬರುತ್ತದೆ. ಸಮಾಜದಲ್ಲಿ ಉತ್ತಮ ಸ್ಥಾನ, ಆರ್ಥಿಕವಾಗಿ ಸದೃಢರಾಗಿರುವವರು ದುರ್ಬಲರಿಗೆ ಅಗತ್ಯ ನೆರವು ನೀಡಬೇಕು ಎಂದು ಹೇಳಿದರು. ಸಮಾರಂಭದಲ್ಲಿ ಕೃಷ್ಣಮೂರ್ತಿ, ಪುಟ್ಟಸ್ವಾಮಿ, ಚೇತನ್‌ಕುಮಾರ್, ಗೀತಾ ಶಂಕರ್, ಗಿರೀಶ್, ಗಣೇಶಮೂರ್ತಿ, ಎಂ.ರಮೇಶ್ ಇತರರಿದ್ದರು.