'ಲೈಂಗಿಕ ಕಿರುಕುಳ ಕೇಸ್​ನಲ್ಲಿ ಪೊಲೀಸರು ಸಮನ್ಸ್‌ ನೀಡಿದ್ರೆ ನಿರ್ಲಕ್ಷಿಸಿ': ರಾಜ್ಯಪಾಲ ಆನಂದ್‌ ಬೋಸ್‌

governer
Published on

ಕೋಲ್ಕತ್ತಾ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ್‌ ಬೋಸ್‌ ಅವರು, ಪ್ರಕರಣ ಸಂಬಂಧ ಪೊಲೀಸರು ಸಮನ್ಸ್‌ ನೀಡಿದರೆ ಅದನ್ನು ನಿರ್ಲಕ್ಷಿಸಿ ಎಂದು ರಾಜಭವನ ಸಿಬ್ಬಂದಿಗೆ ಸೂಚಿಸಿದ್ದಾರೆ.

ಈ ಬಗ್ಗೆ ಆನಂದ್‌ ಬೋಸ್ ಅವರು ತಮ್ಮ ಸಿಬ್ಬಂದಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ, ತಮ್ಮ ಅಧಿಕಾರಾವಧಿಯಲ್ಲಿ ರಾಜಭವನ ಸಿಬ್ಬಂದಿ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆ ಹೂಡಲು ಬರುವುದಿಲ್ಲ. ಪ್ರಕರಣದ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದು, ಅವರು ರಾಜಭವನದ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿಯಾಗಿದೆ. ಆದರೆ ಯಾರೂ ಆತಂಕಪಡುವ ಅವಶ್ಯಕತೆಯಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ತನಿಖಾ ತಂಡವು ರಾಜಭವನದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಲು ಉದ್ದೇಶಿಸಿದೆ ಎಂದು ವರದಿಯಾಗಿದೆ.

ರಾಜಭವನ ಸಿಬ್ಬಂದಿಯೊಬ್ಬರು ರಾಜ್ಯಪಾಲರು ಉದ್ಯೋಗ ಭಡ್ತಿ ಸಂಬಂಧ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಪೊಲೀಸರಿಗೆ ಇತ್ತೀಚೆಗೆ ದೂರು ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net