

ದೆಹಲಿ: ಕೇಂದ್ರ ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿದ ಎನ್‌ಐಆರ್‌ಎಫ್ ಶ್ರೇಯಾಂಕದ ಪಟ್ಟಿಯಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ(IISC) ಅಗ್ರಸ್ಥಾನವನ್ನು ಪಡೆದು ಅತ್ಯುತ್ತಮ ವಿಶ್ವವಿದ್ಯಾಲ ಎನಿಸಿಕೊಂಡಿದೆ.
ವಿಶ್ವವಿದ್ಯಾಲಯದ ವಿಭಾಗದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ ಮೊದಲನೇ ಸ್ಥಾನವನ್ನು ಗಳಿಸಿದ್ದು, ದೆಹಲಿಯ ಜೆಎನ್‌ಯು ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ.
ಇನ್ನು, ಕೊಲ್ಕತ್ತಾದ ಜಾಧವಪುರ ವಿಶ್ವವಿದ್ಯಾಲಯ, ವಾರಣಾಸಿಯ ಬನಾರಸ್ ಹಿಂದು ವಿಶ್ವವಿದ್ಯಾಲಯ, ಮಣಿಪಾಲದ ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ, ಕೊಯಂಬತ್ತೂರಿನ ಅಮೃತಾ ವಿಶ್ವ ವಿದ್ಯಾಪೀಠಂ, ವೆಲ್ಲೂರಿನ ವೆಲ್ಲೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಅಲಿಘಡದ ಅಲಿಘಡ ಮುಸ್ಲಿಂ ವಿಶ್ವವಿದ್ಯಾಲಯ ಮತ್ತು ಹೈದರಾಬಾದ್‌ನಲ್ಲಿರುವ ಯೂನಿವರ್ಸಿಟಿ ಆಫ್ ಹೈದರಾಬಾದ್ ಕ್ರಮವಾಗಿ ನಂತರದ ಸ್ಥಾನಗಳನ್ನು ಪಡೆದಿವೆ.
NIRFನ ಒಟ್ಟಾರೆ ವಿಭಾಗದಲ್ಲಿ ಐಐಟಿ ಮದ್ರಾಸ್ ಒಟ್ಟಾರೆ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದು, ಭಾರತೀಯ ವಿಜ್ಞಾನ ಸಂಸ್ಥೆಯು ಎರಡನೇ ಸ್ಥಾನದಲ್ಲಿದೆ.(ಏಜೆನ್ಸೀಸ್)