ಅಕ್ರಮವಾಗಿ ಕಾಲೇಜು ಕಟ್ಟಡ ನಿರ್ಮಾಣ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

highcourt
Published on

 ಬೆಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಪ್ರದೇಶದಲ್ಲಿ ಅಕ್ರಮವಾಗಿ ಕಾಲೇಜು ಕಟ್ಟಡ ನಿರ್ಮಾಣ ಮಾಡುವುದನ್ನು ಆಕ್ಷೇಪಿಸಿ ಸಲ್ಲಿಸಲಾದ ಸಂಬಂಧ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಈ ವಿಚಾರವಾಗಿ ತೆಂಕಕಾರಂದೂರು ಗ್ರಾಮದ ನಿವಾಸಿ ಅಶೋಕ್ ಆಚಾರ್ಯ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಅರ್ಜಿದಾರರ ಪರ ಹಿರಿಯ ವಕೀಲ ಡಿ.ಆರ್. ರವಿಶಂಕರ್ ವಾದ ಆಲಿಸಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ, ಪಂಚಾಯತ್‌ರಾಜ್ ಇಂಜಿನಿಯರಿಂಗ್ ಇಲಾಖೆಯ ಬೆಳ್ತಂಗಡಿ ಉಪ ವಿಭಾಗದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್, ಸಣ್ಣ ನೀರಾವರಿ ಹಾಗೂ ಇಂಜಿನಿಯರಿಂಗ್ ಇಲಾಖೆಯ ಬೆಳ್ತಂಗಡಿ ಉಪ ವಿಭಾಗದ ಎಕ್ಸಿಕ್ಯೂಟಿವ್ ಇಂಜಿನಿಯರ್, ದಕ್ಷಿಣ ಕನ್ನಡ ಜಿ.ಪಂ. ಸಿಇಒ, ಬೆಳ್ತಂಗಡಿ ತಾ.ಪಂ ಇಒ, ಕುವೆಟ್ಟು ಗ್ರಾ.ಪಂ ಪಿಡಿಒ, ಕಟ್ಟಡದ ಮಾಲೀಕ ಬಿ. ಸುಮಂತ್ ಕುಮಾರ್ ಜೈನ್ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಸೆ.18ಕ್ಕೆ ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net