ಮರಗಳ ಅಕ್ರಮ ಕಡಿತಲೆ

tree
ರಿಪ್ಪನ್‌ಪೇಟೆ ಸಮೀಪದ ಅರಸಾಳು ವಲಯ ಅರಣ್ಯ ಪ್ರದೇಶದಲ್ಲಿ ಕಡಿತಲೆ ಮಾಡಲಾದ ಸಾಗವಾನಿ ತುಂಡುಗಳು.
Published on

ರಿಪ್ಪನ್‌ಪೇಟೆ: ಅರಸಾಳು ವಲಯ ಅರಣ್ಯ ವ್ಯಾಪ್ತಿಯ ಅರಸಾಳು ಗ್ರಾಮದ ಸರ್ವೇ ನಂ.94ರ ಅರಣ್ಯ ಪ್ರದೇಶದಲ್ಲಿ ಗುರುವಾರ ಅಕ್ರಮವಾಗಿ ಸಾಗವಾನಿ ಮರಗಳನ್ನು ಕಡಿತಲೆ ಮಾಡಲಾಗಿದೆ.

ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ ಮರಗಳನ್ನು ಕಡಿದಿರುವ ಮಾಹಿತಿ ಅರಿತ ಅರಣ್ಯಾಧಿಕಾರಿಗಳು ಮರ ಕಡಿದಿರುವ ಸ್ಥಳವನ್ನು ಪತ್ತೆಹಚ್ಚಿದಾಗ ಬೃಹದಾಕಾರದ 5 ಸಾಗವಾನಿ ಮರಗಳನ್ನು ಕಡಿದಿರುವುದು ಕಂಡುಬಂದಿದೆ. ಬೇರೆಡೆಗೆ ಸಾಗಿಸಲು ಇರಿಸಿದ್ದ 16 ತುಂಡುಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಆರ್‌ಎ್ಒ ಶರಣಪ್ಪ, ಡಿಆರ್‌ಎ್ಒ ಮಹೇಶ್ ನಾಯ್ಕ, ಅರಣ್ಯ ರಕ್ಷಕ ಕುಮಾರ್ ಮಾಂಗ್, ಅನಿಲ, ಸಿಬ್ಬಂದಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net