ಬಂಧಿತ ಮಹಮ್ಮದ್ ಆರೀಫ್ ವಿರುದ್ಧ ಈಗಾಗಲೇ ಬಜಪೆ, ಬಣಕಲ್, ಮೂಡುಬಿದಿರೆ ಠಾಣೆಗಳಲ್ಲಿ ಜಾನುವಾರು ಹತ್ಯೆ ತಡೆ ಕಾಯ್ದೆ ಸೇರಿದಂತೆ ನಾಲ್ಕು ಪ್ರಕರಣಗಳು ದಾಖಲಾಗಿವೆ. ಮತ್ತೊಬ್ಬ ಆರೋಪಿ ಇಮ್ರಾನ್ ವಿರುದ್ಧ ಮೂಡುಬಿದಿರೆ, ಕಾರ್ಕಳ ನಗರ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್, ಕೆ.ಪಿ ಆಕ್ಟ್, ಜಾನುವಾರು ಕಳ್ಳತನಕ್ಕೆ ಸಂಬಂಧಿಸಿದಂತೆ ಐದಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇವೆ.