ಕಾರಿನಲ್ಲಿ ಹಿಂಸಾತ್ಮಕವಾಗಿ ಗೋವು ಸಾಗಾಟ!

WhatsApp-Image-2024-03-25-at-7.49.51-AM
Published on

ಪುತ್ತೂರು: ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಕಾರು ಹುಡಿಯಾದ ಸ್ಥಿತಿಯಲ್ಲಿ ಕಬಕದಿಂದ ಪದ್ನಡ್ಕ ಕಲ್ಲಂಡ್ಕ ಸಂಪರ್ಕ ರಸ್ತೆಯಲ್ಲಿ ಭಾನುವಾರ ರಾತ್ರಿ ಪತ್ತೆಯಾಗಿದೆ.

ಕಾರಿನಲ್ಲಿ ಎರಡು ದನ ಹಾಗೂ ಎರಡು ಕರು ಪತ್ತೆಯಾಗಿದ್ದು, ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಕಾರಿನ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ದಾಳಿಯ ತೀವ್ರತೆಗೆ ಕಾರು ಕಾಂಗ್ರೀಟ್ ರಸ್ತೆಯಿಂದ ಬದಿಗೆ ಸರಿದಿದ್ದು, ಮುಂಭಾಗದ ಕನ್ನಟಿ ಸಹಿತ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಪುತ್ತೂರು ಪೋಲಿಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಲ್ಲಂಡ್ಕ - ಪದ್ನಡ್ಕ ಭಾಗಕ್ಕೆ ನಿತ್ಯ ಅಪರಿಚಿತ ವ್ಯಕ್ತಿಗಳು ಹೊರ ಭಾಗದ ವಾಹನಗಳಲ್ಲಿ ಬಂದು ಹೋಗುತ್ತಿರುತ್ತಾರೆ. ಕೆಲವು ವರ್ಷಗಳಿಂದ ಈ ಭಾಗದಲ್ಲಿ ಮಾದಕ ವಸ್ತುಗಳ ಮಾರಾಟ ನಡೆಯುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net