ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶ

8-KGL-5,,
ತಾಲೂಕಿನ ಟಗರಪುರ ಬಳಿ ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಕಾರನ್ನು ಆಹಾರ ಇಲಾಖೆಯ ಅಧಿ ಕಾರಿಗಳು ಹಾಗೂ ಪೊಲೀಸರು ವಶಕ್ಕೆ ಪಡೆದಿರುವುದು.
Published on

ಕೊಳ್ಳೇಗಾಲ: ಓಮ್ನಿ ವ್ಯಾನಿನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ವೇಳೆ ಅಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿದಾಗ ಆರೋಪಿ ಪರಾರಿಯಾಗಿದ್ದು, ಅಕ್ಕಿ ಮತ್ತು ವ್ಯಾನನ್ನು ಜಪ್ತಿ ಮಾಡಲಾಗಿದೆ.

ಪಟ್ಟಣದ ಶಾಹುರ್ ಪಾಷ ಪರಾರಿಯಾದ ಆರೋಪಿ. ಚಿಲಕವಾಡಿ ಸಮೀಪದ ಕೆಸ್ತೂರು ಕ್ರಾಸ್ ಬಳಿ ಓಮ್ನಿ ವ್ಯಾನಿನಲ್ಲಿ ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ವೇಳೆ ಆಹಾರ ನಿರೀಕ್ಷಕ ಪ್ರಸಾದ್, ಎಎಸ್‌ಐ ಮಲ್ಲಿಕಾರ್ಜುನ ಹಾಗೂ ಸಿಬ್ಬಂದಿ ಜಂಟಿಯಾಗಿ ದಾಳಿ ನಡೆಸಿದರು. ಈ ವೇಳೆ ಅಕ್ಕಿ ತುಂಬಿದ್ದ ವ್ಯಾನನ್ನು ಆರೋಪಿ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಬಳಿಕ ಪೊಲೀಸರು 16 ಚೀಲದಲ್ಲಿದ್ದ 800 ಕೆಜಿ ಅಕ್ಕಿ ಹಾಗೂ ಸಾಗಣೆಗೆ ಬಳಸಿದ್ದ ವ್ಯಾನನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net