

ಕೇರಳ: ಮುಂದಿನ ದಿನಗಳಲ್ಲಿ ಭಾರೀ ಮಳೆಯ ಹಿನ್ನೆಲೆ ಇದೀಗ ಕೇರಳದ (Kerala) ಹಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ. ಅಕ್ಟೋಬರ್ 10ರವರೆಗೆ ರಾಜ್ಯದಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಕಾರಾಗೃಹದಿಂದ ಶಿವಮೂರ್ತಿ ಶರಣರ ಬಿಡುಗಡೆ
ಮಂಗಳವಾರ (ಅ.8) ಇಡುಕ್ಕಿಗೆ ಮತ್ತು ಬುಧವಾರ (ಅ.09) ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ ಮತ್ತು ತ್ರಿಶೂರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗುರುವಾರ (ಅ.10) ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ ಮತ್ತು ಕೊಟ್ಟಾಯಂ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದೆ.
ತಿರುವನಂತಪುರಂ, ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್‌ಗೆ ಸೋಮವಾರ (ಅ.07) ಯೆಲ್ಲೋ ಅಲರ್ಟ್ ಘೋಷಿಸಿದ್ದ ಐಎಂಡಿ, ಇದೀಗ ಮಂಗಳವಾರದಂದು ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಮಲಪ್ಪುರಂ ಮತ್ತು ವಯನಾಡ್ ಭಾಗಗಳಲ್ಲಿ ಬಿರುಸಿನ ಮಳೆಯಾಗಲಿದೆ ಎಂದು ಎಚ್ಚರಿಸಿದೆ.
ಇದನ್ನೂ ಓದಿ: ಪ್ರಕೃತಿ ಆರಾಧನೆಯ ‘ಕದಿರು’ ಹಬ್ಬ
ಗುರುವಾರ ಅಲಪ್ಪುಳ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕೋಡ್ ಮತ್ತು ವಯನಾಡ್‌ಗೆ ಯೆಲ್ಲೋ ಅಲರ್ಟ್ ವಿಸ್ತರಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ,(ಏಜೆನ್ಸೀಸ್).