ಭಾರೀ ಮಳೆಯ ಮುನ್ಸೂಚನೆ; ಈ ರಾಜ್ಯದ 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ ಭಾರತೀಯ ಹವಾಮಾನ ಇಲಾಖೆ

Untitled design - 2023-10-16T124154.807
Published on

ನವದೆಹಲಿ: ಭಾರೀ ಮಳೆಯಿಂದಾಗಿ ಕೇರಳದ ಹಲವಾರು ಪ್ರದೇಶಗಳಲ್ಲಿ ಜಲಾವೃತ ಮತ್ತು ಪ್ರವಾಹದ ಪರಿಸ್ಥಿತಿಗಳು ನಿರ್ಮಾಣಗೊಂಡ ಬೆನ್ನಲ್ಲೇ ಇದೀಗ ಭಾರತೀಯ ಹವಾಮಾನ ಇಲಾಖೆ (IMD) ಭಾನುವಾರ ತಿರುವನಂತಪುರಂ ಸೇರಿದಂತೆ ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​ ಅನ್ನು ಘೋಷಿಸಿದೆ.

ಅಕ್ಟೋಬರ್ 15 ರಂದು ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ ಮತ್ತು ಆಲಪ್ಪುಳ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದ್ದು, ಕಣ್ಣೂರು ಮತ್ತು ಕಾಸರಗೋಡು ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂನಲ್ಲಿ ನಿರಂತರ ಮಳೆಯಿಂದಾಗಿ ರಾಜ್ಯದ ದಕ್ಷಿಣದ ಜಿಲ್ಲೆಯ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

ಕರಮಾನಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ವೆಳ್ಳಾಯಣಿ ಕೆರೆಯ ನೀರಿನ ಮಟ್ಟ ಕೂಡ ಹೆಚ್ಚಾಗಿದೆ. ಅಕ್ಕಪಕ್ಕದ ಸುಮಾರು 100 ಮನೆಗಳು ಜಲಾವೃತವಾಗಿದ್ದು, ನೂರಾರು ಎಕರೆ ಜಮೀನಿನಲ್ಲಿದ್ದ ಬೆಳೆಗಳು ನೀರಿನಲ್ಲಿ ಮುಳುಗಡೆಯಾಗಿವೆ.

ಮಳೆ ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಜನರ ನೆರವಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದ್ದು, ಪರಿಹಾರ ಕಾರ್ಯಗಳು ನಡೆಯುತ್ತಿವೆ ಎಂದು ತಿರುವನಂತಪುರ ಜಿಲ್ಲಾಧಿಕಾರಿ ಜೆರೊಮಿಕ್ ಜಾರ್ಜ್ ತಿಳಿಸಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net