

ನವದೆಹಲಿ: ದೇಶದಾದ್ಯಂತ ಹಲವಾರು ರಾಜ್ಯಗಳಲ್ಲಿ ಅಕಾಲಿಕವಾಗಿ ಭಾರೀ ಮಳೆ ಮತ್ತು ಅನಿರೀಕ್ಷಿತ ಹವಾಮಾನದ ಕಾರಣ ಇದೀಗ ಪ್ರತ್ಯೇಕವಾಗಿ ಕೆಲವು ರಾಜ್ಯಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಅನ್ನು ಭಾರತೀಯ ಹವಾಮಾನ ಇಲಾಖೆ (IMD) ಘೋಷಿಸಿದೆ.
ಕರಾವಳಿ ಕರ್ನಾಟಕದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಆಂಧ್ರಪ್ರದೇಶ, ಗೋವಾ, ಮಹಾರಾಷ್ಟ್ರ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಹಿಮಾಚಲ ಪ್ರದೇಶ, ಉತ್ತರಾಖಂಡ, ಕೇರಳ, ಒಡಿಶಾ, ತೆಲಂಗಾಣ, ಛತ್ತೀಸ್‌ಗಢ, ಹರಿಯಾಣ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ಆರೆಂಜ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ,(ಏಜೆನ್ಸೀಸ್).