

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (IMD)ಯು ಭಾರತ ಸರ್ಕಾರದ ಭೂ ವಿಜ್ಞಾನ ಸಚಿವಾಲಯದ ಸಂಸ್ಥೆಯಾಗಿದ್ದು, ದೆಹಲಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಇದು ಭಾರತ ಮತ್ತು ಅಂಟಾರ್ಟಿಕಾದಾದ್ಯಂತ ನೂರಾರು ವೀಕ್ಷಣಾ ಕೇಂದ್ರಗಳನ್ನು ನಿರ್ವಹಿಸುತ್ತದೆ. ವಿಶ್ವ ಹವಾಮಾನ ಸಂಸ್ಥೆಯ ಆರು ಪ್ರಾದೇಶಿಕ ವಿಶೇಷ ಹವಾಮಾನ ಕೇಂದ್ರಗಳಲ್ಲಿ IMD ಕೂಡ ಒಂದಾಗಿದೆ. ಪ್ರಸ್ತುತ ಈ ಸಂಸ್ಥೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 1ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆ: 72
ಹುದ್ದೆಗಳ ವಿವರ
ಪ್ರಾಜೆಕ್ಟ್ ಸೈಂಟಿಸ್ಟ್ II 34
ಪ್ರಾಜೆಕ್ಟ್ ಸೈಂಟಿಸ್ಟ್ I 38
ವಿದ್ಯಾರ್ಹತೆ
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಬಿಇ/ಬಿಟೆಕ್, ಎಂಎಸ್ಸಿ, ಎಂಇ/ಎಂಟೆಕ್, ಡಾಕ್ಟರೇಟ್ ಪದವಿಯನ್ನು ಪೂರ್ಣಗೊಳಿಸಿರಬೇಕು. ಹುದ್ದೆಗಳಿಗೆ ಅನುಗುಣವಾಗಿ ಕೆಲಸದ ಅನುಭವ ಹೊಂದಿರಬೇಕು.
ವಯೋಮಿತಿ, ವೇತನ
ಪ್ರಾಜೆಕ್ಟ್ ಸೈಂಟಿಸ್ಟ್ II ಹುದ್ದೆಗೆ 40 ವರ್ಷ, ಪ್ರಾಜೆಕ್ಟ್ ಸೈಂಟಿಸ್ಟ್ I ಹುದ್ದೆಗೆ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ವಯೋಸಡಿಲಿಕೆ ಅನ್ವಯವಾಗಲಿದೆ. ಪ್ರಾಜೆಕ್ಟ್ ಸೈಂಟಿಸ್ಟ್ II ಹುದ್ದೆಗೆ 67,000ರೂ., ಪ್ರಾಜೆಕ್ಟ್ ಸೈಂಟಿಸ್ಟ್ I ಹುದ್ದೆಗೆ 56,000ರೂ. ಮಾಸಿಕ ವೇತನ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳನ್ನು ವಿದ್ಯಾರ್ಹತೆ, ಕೆಲಸದ ಅನುಭವ, ಸಂದರ್ಶನದ ಆಧಾರದ ಮೇಲೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ
ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು. ಸಂವಹನದ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಐಡಿ ಪುರಾವೆ ಹೊಂದಿರಬೇಕು. ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಅದರ ಪ್ರಮಾಣ ಪತ್ರ ಇತ್ಯಾದಿ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಸಲ್ಲಿಸಬೇಕು. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ತೆಗೆದಿಟ್ಟುಕೊಂಡಿರಬೇಕು.
ಅರ್ಜಿ ಸಲ್ಲಿಸಲು ಕೊನೇ ದಿನ: 1-03-2024
ಹೆಚ್ಚಿನ ಮಾಹಿತಿಗಾಗಿ: mausam.imd.gov.in