

ಇಸ್ಲಾಮಾಬಾದ್: ಪಾಕಿಸ್ತಾನ ಮತ್ತು ಭಾರತ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಪಾಕಿಸ್ತಾನದ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಶನಿವಾರ (10) ಹೇಳಿದ್ದಾರೆ. ಅಮೆರಿಕದ ಮಧ್ಯಸ್ಥಿಕೆಯ ನಂತರ ಭಾರತ ಮತ್ತು ಪಾಕಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಕೆಲವೇ ನಿಮಿಷಗಳ ನಂತರ ಇಶಾಕ್ ದಾರ್ ಹೀಗೆ ಪ್ರತಿಕ್ರಿಯಿಸಿದ್ದಾರೆ.
“ಅಮೆರಿಕದ ಮಧ್ಯಸ್ಥಿಕೆಯಲ್ಲಿ ರಾತ್ರಿಯಿಡೀ ನಡೆದ ಸುದೀರ್ಘ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನಗಳು ಸಂಪೂರ್ಣ ಮತ್ತು ತಕ್ಷಣದ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ದಿಮತ್ತೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು. ಈ ವಿಷಯದ ಬಗ್ಗೆ ನಿಮ್ಮ ಗಮನಕ್ಕೆ ಧನ್ಯವಾದಗಳು!" ಎಂದು ಟ್ರಂಪ್ ಟ್ರುತ್ ಸೋಶಿಯಲ್ ಮೀಡಿಯಾ ವೇದಿಕೆಯಲ್ಲಿ ಪೋಸ್ಟ್ ಮಾಡಿದ್ದಾರೆ.
"ಕಳೆದ 48 ಗಂಟೆಗಳಲ್ಲಿ, ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಮತ್ತು ನಾನು ಪ್ರಧಾನಿ ನರೇಂದ್ರ ಮೋದಿ ಮತ್ತು ಶೆಹಬಾಜ್ ಷರೀಫ್, ವಿದೇಶಾಂಗ ಸಚಿವ ಸುಬ್ರಹ್ಮಣ್ಯಂ ಜೈಶಂಕರ್, ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್ ಮತ್ತು ಅಸಿಮ್ ಮಲಿಕ್ ಸೇರಿದಂತೆ ಹಿರಿಯ ಭಾರತೀಯ ಮತ್ತು ಪಾಕಿಸ್ತಾನಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಮತ್ತು ತಟಸ್ಥ ಸ್ಥಳದಲ್ಲಿ ವ್ಯಾಪಕವಾದ ವಿಷಯಗಳ ಕುರಿತು ಮಾತುಕತೆಗಳನ್ನು ಪ್ರಾರಂಭಿಸಲು ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ" ಎಂದು ರೂಬಿಪ್ X ನಲ್ಲಿ ಹಂಚಿಕೊಂಡಿದ್ದಾರೆ.