ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ ಜಾರಿಗೊಳಿಸಿ; ಅಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ| bike taxi

ramalingareddy
Published on

Karnataka: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಕರ್ನಾಟಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ತಮ್ಮ ಇಲಾಖೆಯ ಅಧಿಕಾರಿಗಳಿಗೆ ಹೈಕೋರ್ಟ್ ಆದೇಶವನ್ನು ಜಾರಿಗೆ ತರುವಂತೆ ಸೂಚನೆ ನೀಡಿದ್ದಾರೆ. ಸಚಿವರು ರಾಜ್ಯದ ಆಟೋ ಮತ್ತು ಕ್ಯಾಬ್ ಚಾಲಕರಿಗೆ ಗುಡ್ ನ್ಯೂಸ್ ನೀಡಿದ್ದು, ಅವರ ಹಲವು ವರ್ಷಗಳ ಹೋರಾಟಕ್ಕೆ ಗೆಲುವು ಸಿಕ್ಕಂತಾಗಿದೆ. ಅವರು ಮೊದಲೇ ಹೇಳಿದಂತೆ ಆರು ವಾರಗಳ ನಂತರ ಬೈಕ್ ಟ್ಯಾಕ್ಸಿ ವಿರುದ್ಧ ಕ್ರಮಕೈಗೊಳ್ಳಲಾಗಿದೆ.

ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಿದ್ದಾರೆ.

ಮೋಟಾರ್ ಬೈಕ್​ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್​ ಏಪ್ರಿಲ್ – 2 ರಂದು ಆರು ವಾರದೊಳಗೆ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಆದೇಶ ನೀಡಿತ್ತು. ಈ ಆದೇಶದಂತೆ ಇದೀಗ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

(ಏಜೆನ್ಸೀಸ್)

ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಕೂಡ ಬೈಕ್ ಟ್ಯಾಕ್ಸಿ ಬಂದ್‌ ಮಾಡುವ ಆದೇಶ ನೀಡುವಂತೆ ಸಚಿವ ರಾಮಲಿಂಗಾರೆಡ್ಡಿಗೆ ಮನವಿ ಮಾಡಿತ್ತು. ಅದರಂತೆ ಆರು ವಾರಗಳ ಒಳಗೆ ಎಲ್ಲ ತರಹದ ಬೈಕ್‌ ಟ್ಯಾಕ್ಸಿಗಳ ಕಾರ್ಯಾಚರಣೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಹಾಗೂ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net