ಜಾತಿ ಗಣತಿ ವರದಿ ಶೀಘ್ರ ಜಾರಿಗೊಳಿಸಿ: ಆರ್.ಕೆ. ಸಿದ್ದರಾಮಣ್ಣ

R.k. Siddaramanna
ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಮಹಾ ಸಂಚಾಲಕ ಆರ್.ಕೆ. ಸಿದ್ದರಾಮಣ್ಣ
Published on

ಶಿವಮೊಗ್ಗ: ರಾಜ್ಯ ಸರ್ಕಾರ ತಕ್ಷಣವೇ ಜಾತಿ ಗಣತಿ ವರದಿಯನ್ನು ಬಿಡುಗಡೆಗೊಳಿಸಿ ಸಾರ್ವಜನಿಕ ಚರ್ಚೆಗೆ ಮುಕ್ತವಾಗಿಸಬೇಕು. ಕೇಂದ್ರ ಸರ್ಕಾರ ಕೂಡ ಜನಗಣತಿ ಜತೆಗೆ ದೇಶಾದ್ಯಂತ ಜಾತಿಗಣತಿ ಮಾಡಬೇಕು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಮಹಾ ಸಂಚಾಲಕ ಆರ್.ಕೆ. ಸಿದ್ದರಾಮಣ್ಣ ಒತ್ತಾಯಿಸಿದರು.

ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ಕಳೆದ ೆಬ್ರವರಿಯಲ್ಲೇ ಜಾತಿ ಜನಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಾರಸುಗಳನ್ನು ಅನುಷ್ಠಾನಗೊಳಿಸುವುದಾಗಿ ಹೇಳಿದ್ದಾರೆ. ಆದರೆ ಅದನ್ನು ಶೀಘ್ರವೇ ಜಾರಿಗೆ ತರಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಚರ್ಚೆಗೂ ಅವಕಾಶ ಕೊಡಬೇಕು. ಅಧಿಕಾರಿಗಳ ಮಟ್ಟದಲ್ಲಿ ಅಧ್ಯಯನ ನಡೆಸಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ 2018ರಿಂದಲೇ ವರದಿ ಜಾರಿಗೆ ಹೋರಾಟ ಮಾಡುತ್ತಿದೆ. ಈ ವರದಿಯನ್ನು ರಾಜಕೀಯವಾಗಿ ನೋಡದೆ ಸಂವಿಧಾನದತ್ತವಾಗಿ ಬಂದಿರುವ ಹಕ್ಕುಗಳನ್ನು ನೀಡುವುದು ಸರ್ಕಾರದ ಕರ್ತವ್ಯ. ಹಿಂದುಳಿದ ವರ್ಗಗಳಿಗೆ ನ್ಯಾಯ ಸಿಗಬೇಕಾದರೆ ಅಂಕಿ ಅಂಶಗಳು ಅತಿ ಮುಖ್ಯವಾಗುತ್ತವೆ. ಯಾವುದೇ ಸರ್ಕಾರಗಳು ಅಂಕಿ ಅಂಶಗಳನ್ನು ಇಟ್ಟುಕೊಂಡು ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಮೀಸಲಾತಿ ಕಲ್ಪಿಸುತ್ತವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೇ ವರದಿ ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಿದರು.
ಕೇಂದ್ರ ಸರ್ಕಾರ ಕೂಡ ಜನಗಣತಿಗೆ ಸಿದ್ಧತೆ ಮಾಡಿಕೊಂಡಿದೆ. ರಾಷ್ಟ್ರ ಮಟ್ಟದಲ್ಲೂ ಜನಗಣತಿ ಜತೆ ಜತೆಗೆ ಜಾತಿ ಗಣತಿಯೂ ಮಾಡಿದರೆ ಹಿಂದುಳಿದ ವರ್ಗಗಳಿಗೆ ನ್ಯಾಯ ಸಿಗಲಿದೆ. ಆ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗಮನ ಹರಿಸಬೇಕೆಂದು ಒತ್ತಾಯಿಸಿದರು.
ಒಕ್ಕೂಟದ ಜಿಲ್ಲಾಧ್ಯಕ್ಷ ವಿ.ರಾಜು, ಪದಾಧಿಕಾರಿಗಳಾದ ಎಸ್.ಪಿ.ಶೇಷಾದ್ರಿ, ಎಸ್.ಬಿ.ಅಶೋಕ್‌ಕುಮಾರ್, ರಾಜೇಶ್, ಜಿ.ಡಿ.ಮಂಜುನಾಥ್, ಶರತ್ ಮರಿಯಪ್ಪ, ವೆಂಕಟೇಶ್, ಬಾಲಪ್ಪ, ಎಸ್.ವಿ.ರಾಜಮ್ಮ, ಹೊನ್ನಪ್ಪ, ಹನುಮಂತಪ್ಪ, ನಾಗರತ್ನ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net