ಹಳೇ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಿ

railway
ಹೊಸ ಪಿಂಚಣಿ ವ್ಯವಸ್ಥೆ ಜಾರಿಗೆ ಒತ್ತಾಯಿಸಿ ರೈಲ್ವೆ ಇಲಾಖೆ ನೌಕರರು ಶಿವಮೊಗ್ಗ ರೈಲ್ವೆ ನಿಲ್ದಾಣದ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
Published on

ಶಿವಮೊಗ್ಗ: ಹೊಸ ಪಿಂಚಣಿ ವ್ಯವಸ್ಥೆ ರದ್ದುಗೊಳಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನೇ ಜಾರಿಗೊಳಿಸುವಂತೆ ಒತ್ತಾಯಿಸಿ ರೈಲ್ವೆ ನಿಲ್ದಾಣದ ಆವರಣದಲ್ಲಿ ಮಂಗಳವಾರ ಸೌತ್ ವೆಸ್ಟರ್ನ್ ಮಜ್ದೂರ್ ಯೂನಿಯನ್ ನೇತೃತ್ವದಲ್ಲಿ ರೈಲ್ವೆ ಕಾರ್ಮಿಕರು ಉಪವಾಸ ಸತ್ಯಾಗ್ರಹ ನಡೆಸಿದರು.

ಹೊಸ ಪಿಂಚಣಿ ವ್ಯವಸ್ಥೆಯಲ್ಲಿ ನಮ್ಮ ಭವಿಷ್ಯಕ್ಕೆ ಭದ್ರತೆಯಿಲ್ಲ. ಇದರಿಂದ ನಮ್ಮ ಕುಟುಂಬದ ಸದಸ್ಯರು ಆತಂಕಕ್ಕೆ ಒಳಗಾಗಿದ್ದಾರೆ. ನಿವೃತ್ತಿ ಬಳಿಕ ನಾವು ಗೌರವಯುತ ಜೀವನ ನಡೆಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಹೊಸ ಪಿಂಚಣಿ ವ್ಯವಸ್ಥೆ ಬದಲಿಗೆ ಹಳೆಯ ವ್ಯವಸ್ಥೆಯನ್ನೇ ಜಾರಿ ಮಾಡಬೇಕೆಂದು ಆಗ್ರಹಿಸಿದರು.
ಜ.11ರವರೆಗೂ ಪ್ರತಿ ದಿನ ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ಪಾಳಿ ಮೇಲೆ ಉಪವಾಸ ಸತ್ಯಾಗ್ರಹ ನಡೆಸಲು ರೈಲ್ವೆ ಕಾರ್ಮಿಕರು ನಿರ್ಧರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net