100 ಪಂಚಾಯಿತಿಗಳಲ್ಲಿ ಸಾವಿತ್ರಿಬಾಯಿ ಫುಲೆ ಯೋಜನೆ ಜಾರಿಗೆ ಕ್ರಮ

Vidhanasoudha
Published on

ಬೆಂಗಳೂರು: ರಾಜ್ಯದ 100 ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ ಪ್ರಾರಂಭಿಸಲು ಸರ್ಕಾರ ಕ್ರಮ ಕೈಗೊಂಡಿದೆ.

ಈ ಯೋಜನೆಯಡಿ ಸ್ವ-ಸಹಾಯ ಗುಂಪುಗಳ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ತರಬೇತಿ ನೀಡಲಾಗುತ್ತಿದ್ದು, ಪ್ರತಿ ಜಿಲ್ಲೆಯಿಂದ 3 ಗ್ರಾಮ ಪಂಚಾಯಿತಿ ಆಯ್ಕೆ ಮಾಡಲಾಗುತ್ತದೆ.

2024-25 ನೇ ಸಾಲಿನ ಆಯವ್ಯಯದಲ್ಲಿ ೋಷಿಸಿದಂತೆ ರಾಜ್ಯದ 100 ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ ತರಬೇತಿ ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ರೂಪಿಸಲಾಗಿದೆ.

ಪ್ರತಿ ಜಿಲ್ಲೆಯಿಂದ ಆಯ್ದ 3 ಗ್ರಾಮ ಪಂಚಾಯಿತಿಗಳಂತೆ ಒಟ್ಟು 29 ಜಿಲ್ಲೆಗಳಿಗೆ 87 ಕೇಂದ್ರಗಳನ್ನು ಹಾಗೂ ಬೆಳಗಾವಿ ಜಿಲ್ಲೆಯಲ್ಲಿ 7 ಮತ್ತು ತುಮಕೂರು ಜಿಲ್ಲೆ 6 ಕೇಂದ್ರಗಳನ್ನು ಸೇರಿ ಒಟ್ಟಾರೆ 100 ಕೇಂದ್ರಗಳನ್ನು ನರೇಗಾ ಯೋಜನೆ ಅಡಿಯಲ್ಲಿ ಅಂದಾಜು 17.50 ಲಕ್ಷ ರೂ.ಗಳಲ್ಲಿ ಕಾರ್ಯಾಗಾರ ನಡೆಸಲು ಪಂಚಾಯತ್ ರಾಜ್ ಆಯುಕ್ತಾಲಯ ಎಲ್ಲ ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಸೂಚಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net