

ಬೆಂಗಳೂರು: ಶಾಲಾ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣ ಅನುಷ್ಠಾನ ವಿಚಾರವಾಗಿ ಶಿಕ್ಷಣ ಇಲಾಖೆ ವತಿಯಿಂದ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು(ಸೋಮವಾರ) ದುಂಡು ಮೇಜಿನ ಸಮಾಲೋಚನಾ ಸಭೆ ನಡೆಯುತ್ತಿದೆ.
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಶಿಕ್ಷಣ ತಜ್ಞರು, ಶಿಕ್ಷಣ ಇಲಾಖೆ ಅಧಿಕಾರಿಗಳು, ವಿವಿಧ ಮಠಾಧೀಶರು, ಮುಸ್ಲಿಂ, ಕ್ರಿಶ್ಚಿಯನ್ ಮುಖಂಡರು, ಶಾಸಕರು, ಸಚಿವರು ಸೇರಿದಂತೆ ಸುಮಾರು 72 ಪ್ರಮುಖರು ಭಾಗವಹಿಸಿದ್ದಾರೆ.
ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ, ಸುತ್ತೂರು ಮಠದ ಶ್ರೀಗಳು, ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿ, ಪೀಟರ್ ಮಚಾಡೋ, ಫಾದರ್ ಫ್ರಾನ್ಸಿಸ್, ಫಾದರ್ ಫ್ರಾನ್ಸಿಸ್ ಭಾಷ್ಯಂ, ಮೊಹಮದ್ ಸನಾವುಲ್ಲಾ, ಅಬ್ದುಸ್ ಸುಭಾನ್, ಶಿಕ್ಷಣ ತಜ್ಞರಾದ ಪ್ರೊ. ಕಸ್ತೂರಿ ರಂಗನ್, ಎಂ.ಕೆ ಶ್ರೀಧರ್, ಎಂ.ಆರ್ ದೊರೆಸ್ವಾಮಿ, ಗುರುರಾಜ ಕರ್ಜಗಿ, ಶಾಸಕ ಎ.ಟಿ ರಾಮಸ್ವಾಮಿ, ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ.