ಮೇಕೆದಾಟು ಯೋಜನೆ ಕುರಿತು ವಾರಾಂತ್ಯದಲ್ಲಿ ಮಹತ್ವದ ಸಭೆ: ಬೊಮ್ಮಾಯಿ

bommai
Published on

ಬೆಂಗಳೂರು : ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕಾನೂನು ತಂಡದೊಂದಿಗೆ ಈ ವಾರಾಂತ್ಯದಲ್ಲಿ ಮಹತ್ವದ ಸಭೆ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಗೃಹ ಸಚಿವರು, ಸುಪ್ರೀಂ ಕೋರ್ಟ್​​ನಲ್ಲಿ ತಮಿಳುನಾಡಿನ ದಾವೆ ಮಾತ್ರ‌ ಇರುವುದರಿಂದ ಯೋಜನೆ ಅನುಷ್ಠಾನಕ್ಕಾಗಿ ಯಾವ್ಯಾವ ತೀರುವಳಿ ಪಡೆಯಬೇಕು ಎಂಬ ಬಗ್ಗೆ ಚರ್ಚಿಸಿ ಮುಂದಿನ ನಿರ್ಧಾರಕ್ಕೆ ಬರಲಾಗುವುದು ಎಂದರು.

ವಿಧಾನ ಮಂಡಲದ ಮುಂಗಾರು ಅಧಿವೇಶನದ ದಿನಾಂಕ ಗೊತ್ತುಪಡಿಸುವ ಬಗ್ಗೆ ಯಾವುದೇ ಚಿಂತನೆ ನಡೆದಿಲ್ಲ. ಈ ಬಗ್ಗೆ ಸಿಎಂ ಬಿಎಸ್​​ವೈ ಜತೆಗೆ ಚರ್ಚಿಸಲಾಗುವುದು ಎಂದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಎರಡು ವರ್ಷಗಳ ನಂತರ ಪುನರ್​​ರಚನೆಯಾಗುತ್ತಿದ್ದು, ಯಾರ್ಯಾರು ಇರ್ತಾರೆ ಎಂದು ಹೇಳುವಷ್ಟು ದೊಡ್ಡವ ನಾನಲ್ಲ. ಆ ಬಗ್ಗೆ ಮಾಹಿತಿ ಇಲ್ಲ. ರಾಜ್ಯಕ್ಕೆ ಒಳ್ಳೆಯ ಪ್ರಾತಿನಿಧ್ಯ ಸಿಗುವ ವಿಶ್ವಾಸವಿದೆ ಎಂದು ಬೊಮ್ಮಾಯಿ‌ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net