ಎಲ್ಲ ಕ್ಷೇತ್ರದಲ್ಲೂ ಮಹಿಳೆಯರ ಛಾಪು

swachtha dina
ಎನ್.ಆರ್.ಪುರದ ಸೋಷಿಯಲ್ ವೆಲ್ಫೇರ್ ಸೊಸೈಟಿ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಹಾಗೂ ಸ್ವಚ್ಛತಾ ದಿನ ಕಾರ್ಯಕ್ರಮವನ್ನು ನ್ಯಾಯಾಧೀಶ ದಾಸರಿ ಕ್ರಾಂತಿಕಿರಣ್ ಉದ್ಘಾಟಿಸಿದರು. ಎಸ್.ಎಸ್.ಸಂತೋಷ್‌ಕುಮಾರ್, ಎಚ್.ಎ.ಸಾಜು, ಪ್ರಭಾಕರ್, ಶಶಿಕಲಾ, ಕಾವ್ಯಶ್ರೀ ಇದ್ದರು.
Published on

ಎನ್.ಆರ್.ಪುರ: ಹೆಣ್ಣು ಸಂಸಾರದ ಕಣ್ಣು ಎನ್ನುವ ಮಾತಿದೆ. ಅದರಂತೆ ಇಂದು ಹೆಣ್ಣು ಸಂಸಾರವನ್ನು ನಿಭಾಯಿಸುವ ಜತೆಗೆ ಎಲ್ಲ ಕ್ಷೇತ್ರದಲ್ಲಿಯೂ ಮುಂಚೂಣಿಯಲ್ಲಿದ್ದಾಳೆ ಎಂದು ಸಿವಿಲ್ ನ್ಯಾಯಾಧೀಶ ದಾಸರಿಕ್ರಾಂತಿಕಿರಣ್ ಹೇಳಿದರು.
ಬುಧವಾರ ಪಟ್ಟಣದ ಸೋಷಿಯಲ್ ವೆಲ್ಫೇರ್ ಸೊಸೈಟಿ ಸಭಾಂಗಣದಲ್ಲಿ ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ ಹಾಗೂ ಶಿಶು ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಹಾಗೂ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಭಾರತೀಯ ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆ, ಮಕ್ಕಳ ಹಕ್ಕುಗಳು, ಸ್ತ್ರೀಶಿಕ್ಷಣ, ಆರೋಗ್ಯ ಮತ್ತು ಪೋಷಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತಿದೆ. ವೈಯಕ್ತಿಕ ಸ್ವಚ್ಛತೆ ಜತೆಗೆ ಪರಿಸರ ನೈರ್ಮಲ್ಯ ಕಾಪಾಡಬೇಕು ಎಂದರು.
ವಕೀಲ ಎಚ್.ಎ.ಸಾಜು ಮಾತನಾಡಿ, ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಹೆಣ್ಣು ಶಿಶು ಹತ್ಯೆ, ಲಿಂಗ ಅಸಮಾನತೆ ಮತ್ತು ದೌರ್ಜನ್ಯ ಸೇರಿ ಇನ್ನಿತರ ಸಮಸ್ಯೆಗಳ ಕುರಿತು ಬೆಳಕು ಚೆಲ್ಲುವುದು, ಸ್ತ್ರೀಯರ ಶಿಕ್ಷಣದ ಮಹತ್ವ, ಮಹಿಳೆಯರ ಆರೋಗ್ಯ ರಕ್ಷಣೆ ಕಾರ್ಯಕ್ರಮದ ಉದ್ದೇಶ ಎಂದು ಹೇಳಿದರು.
ಮಹಿಳಾ ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ ಶಶಿಕಲಾ, ಸಿಡಿಪಿಒ ಇಲಾಖೆ ಸಿಬ್ಬಂದಿ ಕಾವ್ಯಶ್ರೀ, ಸೋಷಿಯಲ್ ವೆಲ್ಫೇರ್ ಸೊಸೈಟಿ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net