

ನವದೆಹಲಿ : ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಹೃದಯದ ಬೈಪಾಸ್ ಸರ್ಜರಿ ಮಾಡಿಸಿಕೊಂಡು ಐಸಿಯುನಲ್ಲಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಇಂದು ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಅವರ ಸ್ಥಿತಿ ನಿರಂತರವಾಗಿ ಸುಧಾರಿಸುತ್ತಿದ್ದು, ವೈದ್ಯರ ಪರಿವೀಕ್ಷಣೆಯಲ್ಲಿದ್ದಾರೆ ಎಂದು ರಾಷ್ಟ್ರಪತಿ ಭವನದ ಅಧಿಕಾರಿಗಳು ತಿಳಿಸಿದ್ದಾರೆ.
ಎಪ್ಪತ್ತೈದು ವರ್ಷ ವಯಸ್ಸಿನ ರಾಷ್ಟ್ರಪತಿ ಕೋವಿಂದ್ ಅವರಿಗೆ ಮಾರ್ಚ್ 26 ರಂದು ಎದೆಯಲ್ಲಿ ಸ್ವಲ್ಪ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರ್ಮಿ ಹಾಸ್ಪಿಟಲ್ನಲ್ಲಿ ಚೆಕ್ಅಪ್ ಮಾಡಲಾಗಿತ್ತು. ತದನಂತರ ಅವರನ್ನು ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಮಾರ್ಚ್ 30 ರಂದು ಬೈಪಾಸ್ ಸರ್ಜರಿ ಮಾಡಿದ್ದು, ತೀವ್ರ ನಿಗಾ ಘಟಕದಲ್ಲಿರಿಸಲಾಗಿತ್ತು. ಇದೀಗ ಆಸ್ಪತ್ರೆಯ ವಿಶೇಷ ವಾರ್ಡ್ಗೆ ಅವರನ್ನು ಸ್ಥಳಾಂತರಿಸಲಾಗಿದ್ದು, ವೈದ್ಯರು ಅವರಿಗೆ ವಿಶ್ರಾಂತಿ ತೆಗೆದುಕೊಳ್ಳುಲು ಹೇಳಿದ್ದಾರೆ ಎನ್ನಲಾಗಿದೆ. (ಏಜೆನ್ಸೀಸ್)