ಕ್ರೀಡೆಯಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿ

sports
ಚಿಕ್ಕಮಗಳೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಆರಂಭವಾದ ದಸರಾ ಕ್ರೀಡಾಕೂಟವನ್ನು ಶಾಸಕ ಎಚ್.ಡಿ.ತಮ್ಮಯ್ಯ ಉದ್ಘಾಟಿಸಿದರು.
Published on

ಚಿಕ್ಕಮಗಳೂರು: ವಿದ್ಯಾರ್ಥಿಗೆ ಜೀವನದಲ್ಲಿ ವಿದ್ಯೆಯಷ್ಟೇ ಕ್ರೀಡೆಯೂ ಮುಖ್ಯ. ಕ್ರೀಡೆಯಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಭಾರತ ದೇಶ, ಸಮಾಜ ನಮಗೇನು ಕೊಟ್ಟಿದೆ ಎಂದು ಪ್ರಶ್ನಿಸುವುದಕ್ಕಿಂತ ನಾವು ಸಮಾಜಕ್ಕೇನು ಕೊಡುಗೆ ಕೊಟ್ಟಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳುವುದು ಮುಖ್ಯ. ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವುದು ಹೆಮ್ಮೆ. ಇದರಲ್ಲಿ ಗೆಲುವು, ಸೋಲು ಮುಖ್ಯವಲ್ಲ. ಕ್ರೀಡಾಸಕ್ತಿಯಿಂದ ಭಾಗವಹಿಸುವುದು ಮುಖ್ಯ. ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸಲು ಪಾಲಕರು, ಶಿಕ್ಷಕರು ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕಿ ಮಂಜುಳಾ ಹುಲ್ಲಹಳ್ಳಿ ಮಾತನಾಡಿ, ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಜಿಲ್ಲೆ, ವಿಭಾಗಮಟ್ಟ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕು. ವಿದ್ಯಾರ್ಥಿಗಳಿಗೆ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಕ್ರೀಡೆ ಮಹತ್ವವನ್ನು ಹೆಚ್ಚಿಸಬೇಕು ಎಂದರು.
ತರಬೇತುದಾರ ವಿನುತ, ಕ್ರೀಡಾಪಟು ಹಾಗೂ ಗ್ರಾಮ ಪಂಚಾಯತಿ ಸದಸ್ಯ ಶಿವು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net