ಭಾರತವನ್ನು ಹೊಗಳಿದ ಪಾಕ್​ ಮಾಜಿ ಪ್ರಧಾನಿ; ಇದರ ಹಿಂದಿನ ಅಸಲಿಯತ್ತು ಬೇರೆಯೇ ಇದೆ!

haqiki azasdi
Published on

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಒಬ್ಬರು ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಹೊಗಳಿದ್ದಾರೆ. ಪಾಶ್ಚಿಮಾತ್ಯರಿಗೆ ಕ್ಯಾರೆ ಎನ್ನದೆ ರಷ್ಯಾದಿಂದ ತೈಲ ಖರೀದಿಸಿದ್ದಕ್ಕೆ ಮತ್ತೊಮ್ಮೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಭೂಪ ಯಾರು ಗೊತ್ತಾ?

ಬೇರೆ ಯಾರೂ ಅಲ್ಲ. ಇಮ್ರಾನ್​ ಖಾನ್! ಇವರು ಹಕೀಕಿ ಆಝಾದಿ ಎನ್ನುವ ಮೆರವಣಿಗೆಯ ಪ್ರಾರಂಭದಲ್ಲಿ ಮಾಡಿದ ಭಾಷಣದಲ್ಲಿ ಭಾರತದ ವಿದೇಶಾಂಗ ನೀತಿಯನ್ನು ಹೊಗಳಿದ್ದಾರೆ.

ಇತ್ತೀಚೆಗೆ ಕೀನ್ಯಾದಲ್ಲಿ ಪಾಕಿಸ್ತಾನದ ಪತ್ರಕರ್ತ ಓರ್ವರನ್ನು ಗುಂಡಿಟ್ಟು ಕೊಲ್ಲಲಾಗಿತ್ತು. ಇವರು ಪಾಕ್​ನ ಸೇನಾಧ್ಯಕ್ಷರ ವಿರುದ್ಧ ದನಿ ಎತ್ತಿದ್ದರು. ಹೀಗಾಗಿ ಕೊಲೆಯ ಹಿಂದೆ ಸೇನೆಯ ಕೈವಾಡ ಇದೆ ಎಂಬ ಶಂಕೆ ಶುರುವಾಗಿದೆ. ಈ ಸಂದರ್ಭವನ್ನು ಚೆನ್ನಾಗಿ ಬಳಸಿಕೊಳ್ಳುತ್ತಿರುವ ಇಮ್ರಾನ್​ ಖಾನ್​, ಭಾರತದ ಕಡೆ ಬೊಟ್ಟು ಮಾಡಿ ತಮ್ಮ ದೇಶದ ಜನರನ್ನು ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ.

ಇತ್ತೀಚೆಗಷ್ಟೇ ಇಮ್ರಾನ್​ ಖಾನ್​ 5 ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಪಾಕಿಸ್ತಾನದ ಚುನಾವಣಾ ಆಯೋಗದಿಂದ ನಿಷೇಧಕ್ಕೆ ಒಳಗಾಗಿದ್ದರು. ಆದರೂ ರಾಜಕೀಯದಲ್ಲಿ ಸಕ್ರಿಯವಾಗಿರಲು ಮಾಡಬೇಕಾದ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net