

ಆಂಧ್ರಪ್ರದೇಶ: ಈ ವರ್ಷ ತೆರೆಕಾಣಲಿರುವ ಬಹುನಿರೀಕ್ಷಿತ ಸಿನಿಮಾಗಳ ಪೈಕಿ ಟಾಲಿವುಡ್ನ ಐಕಾನ್ ಸ್ಟಾರ್, ರಾಷ್ಟ್ರಪ್ರಶಸ್ತಿ ವಿಜೇತ ನಟ ಅಲ್ಲು ಅರ್ಜುನ್ (Allu Arjun) ಅಭಿನಯದ ‘ಪುಷ್ಪ 2’ (Pushpa 2) ಸಿನಿಮಾ ಸದ್ಯ ಸಿನಿಪ್ರೇಕ್ಷಕರಲ್ಲಿ ಭಾರೀ ಕುತೂಹಲ ಕೆರಳಿಸಿದ್ದು, ಬಿಡುಗಡೆಗೂ ಮುನ್ನವೇ ಹೆಚ್ಚಿನ ನಿರೀಕ್ಷೆ ಮೂಡಿಸಿದ್ದೇ ಆದರೂ ಅಧಿಕೃತ ರಿಲೀಸ್ ಯಾವಾಗ ಅಥವಾ ತಾತ್ಕಾಲಿಕ ಬಿಡುಗಡೆ ದಿನಾಂಕ ಎಂದು? ಎಂಬ ಪ್ರಶ್ನೆಗೆ ಚಿತ್ರತಂಡದ ಬಳಿ ಸ್ಪಷ್ಟ ಮಾಹಿತಿ ಇರಲಿಲ್ಲ. ಈ ಕುರಿತು ಜಾಲತಾಣಗಳಲ್ಲಿ ಚಿತ್ರ ತಯಾರಕರನ್ನು ಪ್ರಶ್ನಿಸಿದ್ದ ಅಲ್ಲು ಅರ್ಜುನ್ ಫ್ಯಾನ್ಸ್ಗಳಿಗೆ ಇದೀಗ ಕಡೆಗೂ ಉತ್ತರ ಲಭಿಸಿದೆ.
ಜಾಗತಿಕ ಮಟ್ಟದಲ್ಲಿ ಪುಷ್ಪ 2 ಚಿತ್ರಕ್ಕಾಗಿ ಕಾತರದಿಂದ ಕಾಯುತ್ತಿರುವ ಅಪಾರ ಸಂಖ್ಯೆಯ ಸಿನಿಪ್ರಿಯರು, ಬಹುನಿರೀಕ್ಷಿತ, ಪ್ಯಾನ್ ಇಂಡಿಯಾ ಚಿತ್ರದ ಬಿಡುಗಡೆ ಯಾವಾಗ? ಈ ಹಿಂದೆ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ದಿನದಂದೇ ಚಿತ್ರಮಂದಿಗಳಲ್ಲಿ ಪುಷ್ಪ 2 ತೆರೆ ಕಾಣಲಿದೆ ಎಂದು ಅಧಿಕೃತ ಪೋಸ್ಟರ್ನೊಂದಿಗೆ ಮಾಹಿತಿ ಹಂಚಿಕೊಂಡಿದ್ದ ಚಿತ್ರತಂಡ, ತದನಂತರ ಚಿತ್ರದ ರಿಲೀಸ್ ಬಗ್ಗೆ ಎಲ್ಲಿಯೂ ಧ್ವನಿ ಎತ್ತಿರಲಿಲ್ಲ. ಆದ್ರೆ, ಅಭಿಮಾನಿಗಳ ಒತ್ತಾಯದ ಮೇರೆಗೆ ಇದೀಗ ಅಲ್ಲು ಅರ್ಜುನ್ ಅವರ ಆಕರ್ಷಕ ಪೋಸ್ಟರ್ ಮುಖೇನ ಬಿಡುಗಡೆ ದಿನಾಂಕವನ್ನು ಖಚಿತಪಡಿಸಿದೆ.
ನಿರ್ದೇಶಕ ಸುಕುಮಾರ್ ನಿರ್ದೇಶನದ ಹಾಗೂ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪುಷ್ಪ 2: ದಿ ರೂಲ್ ಚಿತ್ರವು ಇದೇ ಡಿಸೆಂಬರ್ 6, 2024ರಂದು ಜಾಗತಿಕವಾಗಿ ಬಹುತೇಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲು ಸಿದ್ದಗೊಂಡಿದೆ. ಬಹುನಿರೀಕ್ಷಿತ ಸಿನಿಮಾದ ಬಿಡುಗಡೆಗೆ ಇಂದಿನಿಂದ 50 ದಿನ ಮಾತ್ರ ಬಾಕಿ ಉಳಿದಿದೆ. ಸದ್ಯ ಚಿತ್ರಕ್ಕೆ ಕೌಂಟ್ಡೌನ್ ಶುರುವಾಗಿದ್ದು, ಜಾಲತಾಣಗಳಲ್ಲಿ ಅಲ್ಲು ಅರ್ಜುನ್ ಅವರ ಪೋಸ್ಟರ್ ಸಖತ್ ಸದ್ದು ಮಾಡುತ್ತಿದೆ,(ಏಜೆನ್ಸೀಸ್).