ಮಾಸ್ಕ್​ ಕಡ್ಡಾಯ ಶಾಲೆ ಮುಚ್ಚಲ್ಲ: ದಿಲ್ಲಿಯಲ್ಲಿ ಕರೋನಾ ಪ್ರಕರಣ ಹೆಚ್ಚಳ

Mask delhi
Published on

ನವದೆಹಲಿ: ರಾಜಧಾನಿ ದಿಲ್ಲಿಯಲ್ಲಿ ಕರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್​ ಕಡ್ಡಾಯಗೊಳಿಸಲಾಗಿದ್ದು, ಸದ್ಯಕ್ಕೆ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ದಿಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಿದ್ದು, ಮಾಸ್ಕ್​ ಹಾಕದಿರುವವರಿಗೆ 500 ರೂ. ದಂಡ ವಿಧಿಸಲು ಸೂಚಿಸಿದೆ.ಹೊಸ ಮಾರ್ಗಸೂಚಿ ಅನ್ವಯ ಶಾಲೆಗಳು ಮುಂದುವರಿಯಲಿದ್ದು, ಸದ್ಯಕ್ಕೆ ಶಾಲೆಗಳನ್ನು ಮುಚ್ಚುವುದು ಬೇಡ ಎಂಬ ತೀರ್ಮಾನಕ್ಕೆ ಅಧಿಕಾರಿಗಳು ಬಂದಿದ್ದಾರೆ.

ಒಂದು ವೇಳೆ ಕರೋನ ಪ್ರಕರಣಗಳು ಕಾಣಿಸಿಕೊಂಡರೆ ಆಗ ತೀರ್ಮಾನಕ್ಕೆ ಬರಲಾಗುವುದು ಎಂದು ಸಭೆಯಲ್ಲಿ ಚರ್ಚೆಯಾಗಿದೆ.ಅಲ್ಲದೇ ಕೋವಿಡ್​ ಲಸಿಕೆ ಕಡ್ಡಾಯಕ್ಕೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net