ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ 81 ಕೋವಿಡ್ ಪ್ರಕರಣಗಳು ಪತ್ತೆ

Covid
Published on


ಬೆಂಗಳೂರು : ನೆರೆಯ ಕೇರಳದಲ್ಲಿ ಕೋವಿಡ್ ರೂಪಾಂತರ ತಳಿ ಪತ್ತೆ ಬೆನ್ನಲ್ಲೇ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ ಒಂದು ವಾರದಲ್ಲಿ 81 ಸೋಂಕು ಪ್ರಕರಣಗಳು ದೃಢಪಟ್ಟಿವೆ.
ಡಿ. 12 ರಿಂದ 18ವರೆಗೆ ರಾಜ್ಯದಲ್ಲಿ ಕೋವಿಡ್ ಸೋಂಕು ಲಕ್ಷಣ ಹೊಂದಿರುವ 2,619 ಶಂಕಿತರ ಸ್ವಾೃಬ್ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 81 ಜನರು ಸೋಂಕಿಗೆ ಒಳಗಾಗಿದ್ದಾರೆ. ಈ ಅವಧಿಯಲ್ಲಿ ತೀವ್ರ ಉಸಿರಾಟದ ಸಮಸ್ಯೆ (ಸಾರಿ)ಯಿಂದ ಬಳುತ್ತಿರುವ 156 ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಈವರೆಗೂ ಹೊಸ ರೂಪಾಂತರ ತಳಿ ಪತ್ತೆಯಾಗಿಲ್ಲ.
ಈ ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಜ. 1 ರಿಂದ ಈವರೆಗೂ 15,60,681 ಶಂಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 17,044 ಸೋಂಕು ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net