

ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನ ನೀಡಿದ ಐದು ಭರವಸೆಗಳಲ್ಲಿ ಉಚಿತ ಬಸ್ ಪ್ರಯಾಣವೂ ಒಂದು. ಅಧಿಕಾರ ಗದ್ದು ಏರಿದ ಕಾಂಗ್ರೆಸ್ ಸರ್ಕಾರ ಇಂದು ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿರುವ ಕುರಿತಾಗಿ ಘೋಷಣೆ ಮಾಡಿದೆ.
ಶಕ್ತಿ ಯೋಜನೆ ಮೂಲಕ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಸಿದ್ದರಾಮಯ್ಯ ಹೇಳಿದರು. ಈ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಕೆಲವು ಷರತ್ತುಗಳನ್ನು ವಿಧಿಸುವ ಮೂಲಕವಾಗಿ ಜಾರಿಗೆ ತಂದಿದೆ. ಶಕ್ತಿ ಯೋಜನೆ (ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ) ಜೂನ್ 11 ರಿಂದ ಜಾರಿಗೆ ಬರಲಿದೆ. ಆದರೆ ಕೆಲವು ಬಸ್‌ಗಳಲ್ಲಿ ಮಾತ್ರ ಈ ಶಕ್ತಿ ಯೋಜನೆಯು ಅನ್ವಯವಾಗಲಿದೆ.
ಯಾವೆಲ್ಲ ಬಸ್‌ಗಳಲ್ಲಿ ಉಚಿತ ಪ್ರಯಾಣ?
ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ
ಸರ್ಕಾರದ ಸಾಮಾನ್ಯ ಬಸ್, ಎಕ್ಸ್‌ಪ್ರೆಸ್, ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಇರಲಿದೆ.
ಯಾವ್ಯಾವ ಬಸ್‌ಗಳಿಗೆ ಅನ್ವಯಿಸುವುದಿಲ್ಲ:
ಎಸಿ, ನಾನ್ ಎಸಿ ಸ್ಲೀಪರ್ ಬಸ್‌ಗಳಲ್ಲಿ ಉಚಿತ ಪ್ರಯಾಣವಿಲ್ಲ
ಎಸಿ ಮತ್ತು ಐಷಾರಾಮಿ ಬಸ್‌ಗಳಲ್ಲಿ ಉಚಿತ ಪ್ರಯಾಣವಿಲ್ಲ
ಬಿಎಂಟಿಸಿ ಬಸ್‌ಗಳಲ್ಲಿ ಯಾವುದೇ ಸೀಟ್ ಮೀಸಲು ಇರುವುದಿಲ್ಲ
ಅಂತಾರಾಜ್ಯ ಪ್ರಯಾಣಕ್ಕೆ ಉಚಿತ ಸೌಲಭ್ಯ ಇರುವಿದಿಲ್ಲ
KSRTC ಬಸ್‌ನಲ್ಲಿ 50% ರಷ್ಟು ಆಸನ ಪುರುಷರಿಗೆ ಮೀಸಲಾಗಿರುತ್ತೆ. ಇಡೀ ಬಸ್‌ನಲ್ಲಿ ಪೂರ್ಣ ಮಹಿಳೆಯರೇ ಹೋಗುವಂತಿಲ್ಲ, ಜೊತೆಗೆ BMTCಯಲ್ಲಿ ಇನ್ನು ಮುಂದೆ ಮಹಿಳೆಯರಿಗೆ ಪ್ರತ್ಯೇಕ ಸೀಟು ಮೀಸಲಾತಿ ಇರೋದಿಲ್ಲ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.