ಹುಣಸೂರು: ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಜು.20ರಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಳಗ್ಗೆ 10 ಗಂಟೆಗೆ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜನೆಗೊಂಡಿದ್ದು, ಶಾಸಕ ಜಿ.ಡಿ.ಹರೀಶ್‌ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಗಧ ಅಧ್ಯಕ್ಷ ಎಚ್.ಆರ್.ಕೃಷ್ಣಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಮಾಜಿ ಶಾಸಕ ಎಚ್.ಪಿ.ಮಂಜುನಾಥ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ರಾಘವೇಂದ್ರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ.ಅಮರನಾಥ್ ಭಾಗವಹಿಸಲಿದ್ದಾರೆ. ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಹಿರಿಯ ಪತ್ರಕರ್ತರಿಗೆ ಸನ್ಮಾನ ಮತ್ತು ಜಿಲ್ಲಾ ಮಟ್ಟದ ಗ್ರಾಮೀಣಾಭಿವೃದ್ಧಿ ಕುರಿತಾದ ಲೇಖನಕ್ಕೆ ನೀಡುವ ದಿ.ಎಚ್.ಆರ್.ಶ್ರೀನಿವಾಸ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಧಾನ ಕಾರ್ಯದರ್ಶಿ ನೇರಳಕುಪ್ಪೆ ಮಹದೇವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.