ಕೂಡ್ಲೂರು-ಹೊಸೂರಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ

hangodu 1
ಹನಗೋಡು ಹೋಬಳಿಯ ಕೂಡ್ಲೂರು-ಹೊಸೂರು ಗ್ರಾಮದಲ್ಲಿ ಶ್ರೀರಾಮ ಮಂದಿರವನ್ನು ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಉದ್ಘಾಟಿಸಿದರು. ಜಗದೀಶ್,ಸತೀಶ್, ವಿಜಯ, ಸುಂದರೇಗೌಡ, ಕೆ.ಗೋಪಾಲ್ ಇದ್ದರು.
Published on

ಹನಗೋಡು: ಮಾನಸಿಕ ನೆಮ್ಮದಿ ಕೊಡುವಲ್ಲಿ ದೇವಾಲಯಗಳ ಪಾತ್ರ ಮಹತ್ವದ್ದಾಗಿದೆ ಎಂದು ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ತಿಳಿಸಿದರು.

ಹೋಬಳಿಯ ಕೂಡ್ಲೂರು-ಹೊಸೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀರಾಮ ಮಂದಿರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲೆಡೆ ಭಗವಂತ ಇದ್ದಾನೆ ಎಂಬ ನಂಬಿಕೆಯೊಂದಿಗೆ ಬದುಕು ಸಾಗಿಸುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಮಕ್ಕಳಿಗೆ ಸಂಸ್ಕಾರ, ಧ್ಯಾನ ಹಾಗೂ ಧಾರ್ಮಿಕ ಚಿಂತನೆಗಳನ್ನು ಕಲಿಸಬೇಕಿದ್ದು, ಈ ದಿಸೆಯಲ್ಲಿ ಗ್ರಾಮದ ಹಿರಿಯರು ಹಾಕಿಕೊಟ್ಟಿರುವ ಮಾರ್ಗದಲ್ಲಿ ನಡೆಯಬೇಕಿದೆ ಎಂದರು.

ದೇವಾಲಯ ಸೇವಾ ಸಮಿತಿ ವತಿಯಿಂದ ಭಕ್ತರು ಹಾಗೂ ಗ್ರಾಮಸ್ಥರಿಗೆ ಅನ್ನದಾಸೋಹ ವ್ಯವಸ್ಥೆ ಮಾಡಲಾಗಿತ್ತು. ಗ್ರಾಮಸ್ಥರಾದ ಜಗದೀಶ್, ಸತೀಶ್, ವಿಜಯ, ಸುಂದರೇಗೌಡ, ಕೆ.ಗೋಪಾಲ್, ಗೋವಿಂದೇಗೌಡ, ಕೂಡ್ಲೂರುಸಂತೋಷ್, ನರಸಿಂಹ, ರಾಮೇಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net