ಕುಮಾರಸ್ವಾಮಿಯವರನ್ನು ರಾಜ್ಯ ಬಿಜೆಪಿಗೆ ಪ್ರತಿಷ್ಠಾಪಿಸಿದರೂ ಅತಿಶಯೋಕ್ತಿ ಇಲ್ಲ: ಕಾಂಗ್ರೆಸ್​ ಟೀಕೆ

HDK Congress
Published on

ಬೆಂಗಳೂರು: ಇತ್ತೀಚಿಗೆ ಕಲ್ಲಡ್ಕದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಜೈ ಶ್ರೀರಾಮ್​ ಎಂದು ಘೋಷಣೆ ಕೂಗಿರುವುದು ಸಾಕಷ್ಟು ಟೀಕೆಗೆ ಗುರಿಯಾಗಿದೆ. ಕುಮಾರಸ್ವಾಮಿಯವರು ಬಿಜೆಪಿಯವರಿಗಿಂತ ಹೆಚ್ಚು RSS ಭಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್​ ವ್ಯಂಗ್ಯವಾಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್​, ಬಿಜೆಪಿಯವರ ಒಳಜಗಳ ಕುಮಾರಸ್ವಾಮಿಯವರಿಗೆ ವರದಾನವಾಗಲಿದೆ, ಬಿಜೆಪಿ ಹೈಕಮಾಂಡ್ ಕುಮಾರಸ್ವಾಮಿಯವರನ್ನು ರಾಜ್ಯ ಬಿಜೆಪಿಗೆ ಪ್ರತಿಷ್ಠಾಪಿಸಿದರೂ ಅತಿಶಯೋಕ್ತಿ ಇಲ್ಲ ಎಂದು ಟೀಕಿಸಿದೆ.

ಕುಮಾರಸ್ವಾಮಿಯವರು ಬಿಜೆಪಿಯವರಿಗಿಂತ ಹೆಚ್ಚು RSS ಭಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ, ಅವರು ಕೋಮುವಾದದ ಕಡೆಗೆ ಹೋಗುತ್ತಿರುವ ಸ್ಪೀಡ್ ನೋಡಿದರೆ ಕೆಲವೇ ದಿನಗಳಲ್ಲಿ ಬಿಜೆಪಿಗರನ್ನೇ ಓವರ್ ಟೇಕ್ ಮಾಡಿ ಬಿಜೆಪಿಯ ಅಧ್ಯಕ್ಷರಾದರೂ ಅಚ್ಚರಿ ಇಲ್ಲ. ಬಿಜೆಪಿಯವರ ಒಳಜಗಳ ಕುಮಾರಸ್ವಾಮಿಯವರಿಗೆ ವರದಾನವಾಗಲಿದೆ, ಬಿಜೆಪಿ ಹೈಕಮಾಂಡ್ ಕುಮಾರಸ್ವಾಮಿಯವರನ್ನು ರಾಜ್ಯ ಬಿಜೆಪಿಗೆ ಪ್ರತಿಷ್ಠಾಪಿಸಿದರೂ ಅತಿಶಯೋಕ್ತಿ ಇಲ್ಲ.

ಬಿಜೆಪಿಯಲ್ಲಿ ಸಮನ್ವಯತೆಯ ಕೊರತೆ ಇದೆ ಎನ್ನುವುದನ್ನು ಸ್ವತಃ ಬಿಜೆಪಿ ನಾಯಕರೇ ಒಪ್ಪಿಕೊಂಡಿದ್ದಾರೆ. ಅಸಲಿಗೆ ಇದು ಸಮನ್ವಯತೆಯ ಕೊರತೆಯಲ್ಲ, ಅಂತರ್ಯುದ್ಧದ ಪ್ರಭಾವ. ಬಿಜೆಪಿಯಲ್ಲಿ ಹಲವರಿಗೆ ಆರ್​. ಆಶೋಕ್​ ಅವರನ್ನು ಒಪ್ಪಿಕೊಳ್ಳಲಾಗುತ್ತಿಲ್ಲ, ಇನ್ನೂ ಹಲವರಿಗೆ ವಿಜಯೇಂದ್ರ ಅವರನ್ನು ಸಹಿಸಲಾಗುತ್ತಿಲ್ಲ.

ಇಷ್ಟು ದಿನ ವಿರೋಧ ಪಕ್ಷದ ನಾಯಕನಿರಲಿಲ್ಲ, ಈಗ ವಿರೋಧ ಪಕ್ಷದ ನಾಯಕನಿಗೆ ಬೆಂಬಲವೇ ಇಲ್ಲ. ಒಟ್ಟಿನಲ್ಲಿ ಬಿಜೆಪಿಗೆ ಭವಿಷ್ಯವಿಲ್ಲ ಎಂದು ರಾಜ್ಯ ಕಾಂಗ್ರೆಸ್​ ಸರಣಿ ಟ್ವೀಟ್​ ಮೂಲಕ ವ್ಯಂಗ್ಯವಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net