ಕಟೀಲ್​, ಬೊಮ್ಮಾಯಿ, ಶೋಭಾ, ಸಿ.ಟಿ. ರವಿ ಅವರೇ ನಿಮಗೂ ನಿಮ್ಮ ಮನೆಗೂ ಫ್ರೀ, ಇದು ನಮ್ಮ ಗ್ಯಾರಂಟಿ: ಕಾಂಗ್ರೆಸ್​

BJP Leaders
Published on

ಬೆಂಗಳೂರು:  ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶುಕ್ರವಾರ ಅಧಿಕೃತವಾಗಿ ಜಾರಿ ಮಾಡಿದೆ.

ಕಾಂಗ್ರೆಸ್​ ಗ್ಯಾರಂಟಿಗಳ ಕುರಿತು ಬಿಜೆಪಿ ನಾಯಕರು ಚುನಾವಣೆಗೂ ಮುನ್ನ ಹಾಗೂ ಫಲಿತಾಂಶ ಬಂದ ನಂತರ ಸರಣಿ ಟೀಕೆಗಳನ್ನು ಮಾಡುವ ಮೂಲಕ ಅಪಹಾಸ್ಯ ಮಾಡಿದ್ದರು. ಇದೀಗ ಗ್ಯಾರಂಟಿ ಯೋಜನೆಗಳ ಘೋಷಣೆ ಮಾಡಿರುವ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್​ ಘಟಕ ಸರಣಿ ಟ್ವೀಟ್​ ಮಾಡುವ ಮೂಲಕ ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿದೆ.

Congress Tweet

ಟ್ವೀಟ್​ನಲ್ಲಿ ಏನಿದೆ?

ನಳಿನ್​ ಕುಮಾರ್​ ಕಟೀಲ್​ ಅವರೇ ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ, ಬಸವರಾಜ್​ ಬೊಮ್ಮಾಯಿ ಅವರೇ ನಿಮ್ಮ ಮನೆಗೂ ಫ್ರೀ, ಶೋಭಾ ಕರಂದ್ಲಾಜೆ ಅವರೇ ನಿಮಗೂ ಪ್ರಯಾಣ ಫ್ರೀ, ಸಿ.ಟಿ. ರವಿ ಅವರೇ ನಿಮ್ಮ ಮನೆಯವರಿಗೂ ₹2000 ಫ್ರೀ, ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ) ಎಂದು ಟ್ವೀಟ್​ ಮಾಡುವ ಮೂಲಕ ಕುಟುಕಿದೆ.

ನಾವು ನುಡಿದಂತೆ ನಡೆಯುವವರು, ಮಾತು ಉಳಿಸಿಕೊಳ್ಳುವವರು. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ, ಎಂದು ರಾಜ್ಯ ಕಾಂಗ್ರೆಸ್​ ಘಟಕ ಸರಣಿ ಟ್ವೀಟ್​ ಮಾಡುವ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net