ಸಿರಿಧಾನ್ಯಕ್ಕೆ ಪ್ರೋತ್ಸಾಹ ಧನ ಕಡಿತ ಕೈಬಿಟ್ಟ ಸರ್ಕಾರ

dip Ganarajyothsava (1)-02
Published on

ಚಿತ್ರದುರ್ಗ: ಹಣಕಾಸು ಕೊರತೆ ಹಿನ್ನೆಲೆಯಲ್ಲಿ ಸಿರಿಧಾನ್ಯ ಬೆಳೆಗಾರರಿಗೆ ಕೊಡುತ್ತಿದ್ದ ಪ್ರೋತ್ಸಾಹ ಧನ ಕಡಿತಗೊಳಿಸುವ ಚಿಂತನೆ ಕೈ ಬಿಡಲಾಗಿದ್ದು, ಮುಂದಿನ ಬಜೆಟ್‌ನಲ್ಲಿ ಪ್ರೋತ್ಸಾಹ ಧನವನ್ನು ಈಗಿರುವ 10,000ದಿಂದ 15,000ಕ್ಕೆ ಹೆಚ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ ಎಂದು ಕೃಷಿ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಗುರುವಾರ ಸುದ್ದಿಗಾರರ ಜತೆ ಮಾತನಾಡಿ, ಸಿರಿ ಧಾನ್ಯ ಬೆಳೆಗೆ ಪ್ರೋತ್ಸಾಹ ಮುಂದಿವರಿಯಲಿದೆ ಈ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದು ಸಚಿವರು ಸ್ಪಷ್ಟಪಡಿಸಿದರು.

ರೈತಶಕ್ತಿ ಯೋಜನೆಗೆ ಜ.31ರಂದು ಸಿಎಂ ಚಾಲನೆ ನೀಡುತ್ತಿದ್ದಾರೆ. ನರೇಗಾ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯಲ್ಲೂ ಅಡಕೆಗೆ ಅವಕಾಶ ಮಾಡಿ ಕೊಡಬೇಕೆಂಬ ಬೇಡಿಕೆ ಕುರಿತಂತೆ ಪ್ರಸ್ತಾವನೆ ಕಳಿಸಲು ಅಧಿಕಾರಿಗಳಿಗೆ ಸೂಚಿಸುವುದಾಗಿ ಹೇಳಿದರು.

ಜನಾರ್ದನರೆೆಡ್ಡಿ ಅವರ ಪಾರ್ಟಿಯಿಂದ ಬಿಜೆಪಿಗೆ ಯಾವುದೇ ಹಾನಿ ಆಗದು. ಆದರೆ, ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ವಿಚಾರವನ್ನು ವರಿಷ್ಠರು ಹೇಳಬೇಕು ಎಂದರು.

ಅನೇಕ ಕ್ಷೇತ್ರಗಳಿಗೆ ಕಾಂಗ್ರೆಸ್‌ಗೆ ಅಭ್ಯರ್ಥಿಗಳೇ ಇಲ್ಲ. ಆದ್ದರಿಂದ ಪಕ್ಷಕ್ಕೆ ಬರುವವರನ್ನು ಸೇರಿಸಿಕೊಳ್ಳುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ನಾವ್ಯಾರು ಮರಳಿ ಹೋಗುವುದಿಲ್ಲ ಎಂದು ಹೇಳಿದರು.

*ಆತ್ಮಗೌರವಕ್ಕಾಗಿ ತಡೆಯಾಜ್ಞೆ ತಂದಿದ್ದೇವೆ

ದುಷ್ಟ ಶಕ್ತಿಗಳು ಪಕ್ಕದಲ್ಲೇ ಇರುತ್ತವೆ, ಇದು ಎಲೆಕ್ಟ್ರಾನಿಕ್ ಯುಗ, ಯಾರು ಏನು ಬೇಕಾದರೂ ಮಾಡಬಹುದೆಂದು ಹೇಳಿದ ಸಚಿವರು, ಸಮ್ಮಿಶ್ರ ಸರ್ಕಾರ ಉರುಳಿಸಿದ್ದಾರೆಂದು, ಕಾಂಗ್ರೆಸ್, ಜೆಡಿಎಸ್ ಮುಖಂಡರ ಸಿಟ್ಟು ನಮ್ಮಗಳ ಮೇಲಿದೆ. ಯಾವ ಮಟ್ಟಕ್ಕೂ ಇಳಿಯಲು ಹೇಸದ ಜನರಿದ್ದಾರೆ. ಆದ್ದರಿಂದಲೇ ಆತ್ಮಗೌರವಕ್ಕಾಗಿ ತಡೆಯಾಜ್ಞೆ ತಂದಿದ್ದೇವೆ ಎಂದು ಸ್ಪಷ್ಟಪಡಿಸಿದರು.

*ಐಯಾಮ್ ಪೈನ್

ಮಂಡಿ ನೋವಿನ ಹಿನ್ನೆಲೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡಿದ್ದು, ಈಗ ಚೆನ್ನಾಗಿದ್ದೇನೆ. ದಿನಕ್ಕೆ 2-3 ಕಿಮೀ ವಾಕ್ ಮಾಡುತ್ತಿದ್ದೇನೆ ಎಂದು ಸಚಿವ ಪಾಟೀಲ್ ಹೇಳಿದರು.

*ಚಿತ್ರದುರ್ಗಕ್ಕೆ ಪ್ರಧಾನಿ

ಚಿತ್ರದುರ್ಗಕ್ಕೆ ಫೆಬ್ರವರಿ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಬರಲಿದ್ದು, ಭದ್ರಾ ಮೇಲ್ದಂಡೆ ಕಾಮಗಾರಿಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲಿದ್ದಾರೆ. ಸರ್ಕಾರಿ ಮೆಡಿಕಲ್ ಕಾಲೇಜು, ನೇರ ರೈಲು ಮಾರ್ಗ ಮೊದಲಾದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net