

ಚಿತ್ರದುರ್ಗ: ಕಾವೇರಿದ ಚುನಾವಣೆಯ ವಾತಾವರಣದಲ್ಲಿ ಇರುವ ಜೆಡಿಎಸ್ ಅಭ್ಯರ್ಥಿಯೊಬ್ಬರಿಗೆ ಅದರ ನಡುವೆಯೇ ಆದಾಯ ತೆರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಐಟಿ ಅಧಿಕಾರಿಗಳ ತಂಡ ಅಭ್ಯರ್ಥಿಯ ಮನೆ ಮೇಲೆ ದಾಳಿ ಮಾಡಿದ್ದು, ಅಭ್ಯರ್ಥಿಗಾಗಿ ಕಾಯುತ್ತಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ. ರವೀಂದ್ರಪ್ಪ ಅವರ ಮನೆ ಮೇಲೆ ಈ ದಾಳಿ ನಡೆದಿದೆ. ಆದಾಯ ತೆರಿಗೆ ಅಧಿಕಾರಿಗಳ ಜತೆಗೆ ಚುನಾವಣೆ ಅಧಿಕಾರಿಗಳೂ ರವೀಂದ್ರಪ್ಪ ಮನೆಗೆ ಬಂದಿದ್ದಾರೆ.
ಸರ್ಕಾರಿ ಸಂಸ್ಥೆಯಲ್ಲಿ ಮುಖ್ಯ ಇಂಜಿನಿಯರ್ ಆಗಿದ್ದ ರವೀಂದ್ರಪ್ಪ, ನಿವೃತ್ತಿ ಬಳಿಕ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ನಂಜಾವಧೂತ ಶ್ರೀಗಳಿಗೆ ಜನ್ಮದಿನದ ಶುಭಾಶಯ ಕೋರಲು ರವೀಂದ್ರಪ್ಪ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಮಠಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಅಧಿಕಾರಿಗಳು ರವೀಂದ್ರಪ್ಪ ಆಗಮನಕ್ಕೆ ಕಾಯುತ್ತಿದ್ದಾರೆ.