ಭದ್ರಾವತಿಯಲ್ಲಿ ಅನೈತಿಕ ಚಟುವಟಿಕೆ ಹೆಚ್ಚಳ

suresh
Published on

ಶಿವಮೊಗ್ಗ: ಸಜ್ಜನರು ಭದ್ರಾವತಿಯಲ್ಲಿ ವಾಸಮಾಡುವಂತಹ ಪರಿಸ್ಥಿತಿಯೇ ಇಲ್ಲವಾಗಿದೆ. ಪೊಲೀಸರು ಹಾಗೂ ರಾಜಕಾರಣಿಗಳು ಭದ್ರಾವತಿಯನ್ನು ಅಶಾಂತಿಯತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಭದ್ರಾವತಿ ಹಿತರಕ್ಷಣಾ ವೇದಿಕೆ ಮುಖ್ಯಸ್ಥ ಸುರೇಶ್ ಆರೋಪಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭದ್ರಾವತಿಯಲ್ಲಿ ಗಾಂಜಾ, ಇಸ್ಪೀಟ್, ಓಸಿ ಮುಂತಾದ ಅಕ್ರಮ ಚಟುವಟಿಕೆಗಳು ಹೆಚ್ಚಾಗಿವೆ. ಇದರ ಜತೆಗೆ ದಲಿತರ ಮೇಲೆ ಹಲ್ಲೆಯೂ ಆತಂಕದ ವಿಷಯವಾಗಿದೆ. ಭದ್ರಾವತಿಯಲ್ಲಿ ದಲಿತ ಯುವಕರಿಬ್ಬರಿಗೆ ಹೊಸಮನೆ ಠಾಣೆ ಪೊಲೀಸ್ ಅಧಿಕಾರಿ ಚಿತ್ರ ಹಿಂಸೆ ನೀಡಿದ್ದಾರೆ ಎಂದು ದೂರಿದರು.

ಈ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ದಲಿತ ಯುವಕರಾದ ದೀಪಕ್ ಮತ್ತು ಅನಿಲ್ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್‌ಇನ್ ಸ್ಪೆಕ್ಟರ್ ಅವರನ್ನು ಅಮಾನತು ಮಾಡಬೇಕು. ಇಲ್ಲದಿದ್ದರೆ ಜಾಗೃತ ಸಮಾಜದಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಪ್ರಮುಖರಾದ ತೀರ್ಥೇಶ್, ಅನಿಲ್‌ಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net