ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಳ

dengue awareness
ಸಾಗರದ ವಿವಿಧ ವಾರ್ಡ್‌ಗಳಲ್ಲಿ ಲಾರ್ವಾ ಪತ್ತೆ ಕಾರ್ಯದಲ್ಲಿ ಭಾಗಿಯಾಗಿರುವ ಆರೋಗ್ಯ ಇಲಾಖೆ ಸಿಬ್ಬಂದಿ. ಡಾ. ಭರತ್, ಟಿ.ಪಿ.ರಮೇಶ್, ಎಂ.ಶ್ರೀನಿವಾಸ್ ಇತರರಿದ್ದರು.
Published on

ಸಾಗರ: ತಾಲೂಕಿನಲ್ಲಿ ದಿನೇದಿನೆ ಡೆಂೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈಗಾಗಲೇ 29 ಜನರು ಸರ್ಕಾರಿ ಉಪವಿಭಾಗೀಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡು ತಾಲೂಕಿನಾದ್ಯಂತ ತಂಡಗಳನ್ನು ರಚಿಸಿ ಲಾರ್ವಾ ಪತ್ತೆ ಮತ್ತು ನಾಶಪಡಿಸುವ ಕಾರ್ಯ ಆರಂಭಿಸಿದೆ.

ಶನಿವಾರ ಸಾಗರದ ವಿವಿಧ ವಾರ್ಡ್‌ಗಳಲ್ಲಿ ತಂಡಗಳು ಲಾರ್ವಾ ಪತ್ತೆ ಕಾರ್ಯ ಕೈಗೊಂಡವು. ಬಹುತೇಕ ಕಡೆ ನೀರಿನ ಪ್ಲಾಸ್ಟಿಕ್ ಕುಂಡ, ಟೈರ್, ತೊಟ್ಟಿ, ಫ್ರಿಡ್ಜ್ ಹಿಂಭಾಗದಲ್ಲಿ ಸಂಗ್ರಹವಾಗಿರುವ ನೀರಿನಲ್ಲಿ ಭಾರಿ ಸಂಖ್ಯೆಯಲ್ಲಿ ಲಾರ್ವಾ ಪತ್ತೆಯಾಗಿವೆ.
ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತರು, ಪಿಡಿಒ ಹಾಗೂ ಸಿಬ್ಬಂದಿ ಸಹಕಾರದಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಆಸ್ಪತ್ರೆಯಲ್ಲಿ ಡೆಂೆ ರೋಗಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿದ್ದರೂ ಬೆಡ್‌ಗಳ ಕೊರತೆಯಿದೆ. ಓರ್ವ ನರ್ಸ್ ಡೆಂೆಯಿಂದ ಬಳಲುತ್ತಿದ್ದಾರೆ.
ಉಪವಿಭಾಗೀಯ ಆಸ್ಪತ್ರೆ ಸಿವಿಲ್ ಸರ್ಜನ್ ಡಾ. ಪರಪ್ಪ ಮಾತನಾಡಿ, ಎಲ್ಲೆಲ್ಲಿ ನೀರು ಸಂಗ್ರಹವಾಗಿ ಲಾರ್ವಾ ಪತ್ತೆಯಾಗುತ್ತಿದೆಯೋ ಅವೆಲ್ಲವನ್ನೂ ನಾಶಪಡಿಸಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.
ಸಾಗರದಲ್ಲಿ 3 ತಂಡ ರಚಿಸಿ ಲಾರ್ವಾ ಪತ್ತೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದು, ಮನೆಮನೆಗೆ ಕರಪತ್ರ ಹಂಚುತ್ತಿದ್ದೇವೆ. ತಾಲೂಕು ಆರೋಗ್ಯಾಧಿಕಾರಿಗಳು, ಇಲಾಖೆ ವೈದ್ಯರು ಹಾಗೂ ಸಿಬ್ಬಂದಿ ಸಭೆ ನಡೆಸಿ ತುರ್ತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಗೋಪಾಲಕೃಷ್ಣ ಬೇಳೂರು, ಈಗಾಗಲೇ ಅಧಿಕಾರಿಗಳ ಮಟ್ಟದಲ್ಲಿ ಸಭೆ ಕರೆದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸೂಚಿಸಿದ್ದೇನೆ. ನಗರಕ್ಕಿಂತ ಗ್ರಾಮಾಂತರ ಪ್ರದೇಶದಲ್ಲೇ ಹೆಚ್ಚು ಡೆಂೆ ಪ್ರಕರಣಗಳು ಕಂಡುಬರುತ್ತಿವೆ. ಶೀಘ್ರದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಒಳಗೊಂಡಂತೆ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತಾಲೂಕಿನಲ್ಲಿ ನಡೆಯುತ್ತಿರುವ ಲಾರ್ವಾ ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಭರತ್, ಟಿ.ಪಿ.ರಮೇಶ್, ಎಂ.ಶ್ರೀನಿವಾಸ್ ಹಾಗೂ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net