ಮಳೆ, ಚಳಿ, ಶೀತಗಾಳಿ ಹೆಚ್ಚಳ: ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

COLD FINAL
Published on

ಚಿಕ್ಕಬಳ್ಳಾಪುರ: ಮಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದ್ದು, ಥಂಡಿ ವಾತಾವರಣ ಮೂಡಿದೆ. ಚಳಿ, ಶೀತಗಾಳಿ ಹೆಚ್ಚಾಗಿರುವ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಇಂದು(ಡಿ.12) ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜು ರಜೆ ಘೋಷಿಸಿದ್ದಾರೆ.

ಜಿಲ್ಲಾಧಿಕಾರಿ ಎನ್.ಎಂ.ನಾಗರಾಜು ಅವರ ಮೌಖಿಕ ಆದೇಶದ ಮೇರೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಪಿಯು ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಕೂಡ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಒಂದು ದಿನದ ಮಟ್ಟಿಗೆ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.(ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net